ನವದೆಹಲಿ: ಕೇಂದ್ರವು ಇಂದು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿಸಾಧನೆ ಮಾಡಿದವರಿಗೆ ನೀಡಲು ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ ಎಂಬ ಹೊಸ ರಾಷ್ಟ್ರೀಯ ಪ್ರಶಸ್ತಿಗಳನ್ನು ಅನಾವರಣಗೊಳಿಸಿದೆ ಮತ್ತು ವಿವಿಧ ವಿಜ್ಞಾನ ವಿಭಾಗಗಳ ಸುಮಾರು 300 ಪ್ರಶಸ್ತಿಗಳನ್ನು ರದ್ದುಗೊಳಿಸಿದೆ.
ರಾಷ್ಟ್ರೀಯ ವಿಜ್ಞಾನ ಪುರಸ್ಕಾರವು ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ನೀಡಲ್ಪಡುವ ಉನ್ನತ ಪುರಸ್ಕಾರವಾಗಲಿದ್ದು, ಇದನ್ನು ವಿಜ್ಞಾನ ರತ್ನ, ವಿಜ್ಞಾನ ಶ್ರೀ, ವಿಜ್ಞಾನ ಯುವ-ಶಾಂತಿ ಸ್ವರೂಪ್ ಭಟ್ನಾಗರ್ ಮತ್ತು ವಿಜ್ಞಾನ ತಂಡ ಎಂಬ ನಾಲ್ಕು ವಿಭಾಗಗಳಲ್ಲಿ ನೀಡಲಾಗುವುದು ಎಂದು ಹೇಳಿಕೆ ತಿಳಿಸಿದೆ.
ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ನೇತೃತ್ವದ ಸಮಿತಿಯು 13 ಡೊಮೇನ್ಗಳಲ್ಲಿ ವಿಜ್ಞಾನಿಗಳನ್ನು ಆಯ್ಕೆ ಮಾಡಲಿದೆ.
“ಭಾರತೀಯ ಸಮುದಾಯಗಳು ಅಥವಾ ಸಮಾಜಕ್ಕೆ ಪ್ರಯೋಜನವಾಗುವ ಅಸಾಧಾರಣ ಕೊಡುಗೆಗಳನ್ನು ನೀಡಿದ ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ಜನರು ಸಹ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ” ಎಂದು ಅದು ಹೇಳಿದೆ.
ಪ್ರತಿ ವರ್ಷ ಜನವರಿ 14 ರಿಂದ ಫೆಬ್ರವರಿ 28 ರವರೆಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗುತ್ತದೆ. ಪ್ರಶಸ್ತಿಗಳನ್ನು ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನದಂದು ಘೋಷಿಸಲಾಗುತ್ತದೆ ಮತ್ತು ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ಪ್ರದಾನಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.