ನವದೆಹಲಿ: ಜನತಾ ದಳ (ಜಾತ್ಯತೀತ) ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್ಡಿಎ) ಸೇರ್ಪಡೆಗೊಂಡಿದೆ. ಜೆಡಿಎಸ್ನ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಈ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟ್ವಿಟ್ ಮಾಡಿದ್ದು, “ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಹಿರಿಯ ನಾಯಕರು ಹಾಗೂ ಗೃಹ ಸಚಿವರಾದ
ಅಮಿತ್ ಶಾ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ಜೆಡಿಎಸ್ ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಎನ್ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇದು ನವ ಭಾರತ, ಬಲಿಷ್ಠ ಭಾರತದ ಎನ್ಡಿಎ ಮತ್ತು ಗೌರವಾನ್ವಿತ ಪ್ರಧಾನಿಯವರ ದೃಷ್ಟಿಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದಿದ್ದಾರೆ.
Met Former Chief Minister of Karnataka and JD(S) leader Shri H.D. Kumaraswamy in the presence of our senior leader and Home Minister Shri @AmitShah Ji.
I am happy that JD(S) has decided to be the part of National Democratic Alliance. We wholeheartedly welcome them in the NDA.… pic.twitter.com/eRDUdCwLJc— Jagat Prakash Nadda (@JPNadda) September 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.