ವಾರಣಾಸಿ: ನಾರಿ ಶಕ್ತಿ ವಂದನ್ ಅಧಿನಿಯಮ ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಭಾರತೀಯ ಶಾಸಕಾಂಗಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಬಲಪಡಿಸುವ ಸಮಗ್ರ ದೃಷ್ಟಿಕೋನವನ್ನು ಹೊಂದಿರುವ ಕಾನೂನಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.
ವಾರಣಾಸಿಯ ಮಹಿಳೆಯರೊಂದಿಗೆ ಇಂದು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈ ಹಿಂದೆ ವಿರೋಧಿಸುತ್ತಿದ್ದ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಇಂದು ಬೆಂಬಲಿಸಲು ಕೆಲವು ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದ್ದು ದೇಶದ ಮಹಿಳೆಯರ ಶಕ್ತಿ ಎಂದು ಹೇಳಿದರು.
ನಾರಿನಶಕ್ತಿ ವಂದನ್ ಅಭಿನಂದನ್ ಕಾರ್ಯಕ್ರಮ’ ಎಂದು ಕರೆಯಲಾದ ಕಾರ್ಯಕ್ರಮದಲ್ಲಿ ಸುಮಾರು 5000 ಮಹಿಳೆಯರು ನೆರೆದಿದ್ದು, ಮಹಿಳಾ ಮೀಸಲಾತಿ ಮಸೂದೆಯನ್ನು ತರುವುದಕ್ಕಾಗಿ ಪ್ರಧಾನಿಯವರಿಗೆ ಅದ್ದೂರಿ ಸ್ವಾಗತ ಕೋರಿದರು. ಇಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿ ಭೇಟಿಯಲ್ಲಿರುವ ಮೋದಿ ಸುಮಾರು 1500 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಾರಣಾಸಿಯ ಗಂಜೇರಿ ಪ್ರದೇಶದಲ್ಲಿಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆಯನ್ನು ಮೋದಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ತಮ್ಮ ಸರ್ಕಾರವು ಕ್ರೀಡೆಯನ್ನು ಯುವಕರ ವೃತ್ತಿ ಮತ್ತು ಫಿಟ್ನೆಸ್ನೊಂದಿಗೆ ಜೋಡಿಸಿದೆ ಮತ್ತು ಈಗ ಆಡುವವನು ಏಳಿಗೆ ಹೊಂದುತ್ತಾನೆ, ಜೋ ಖೇಲೇಗಾ, ವಹೀ ಖಿಲೇಗಾ ಎಂಬುದೇ ರಾಷ್ಟ್ರದ ಚಿತ್ತ. ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸಿದಾಗ ಅದು ಯುವ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಸಕಾರಾತ್ಮಕ ಪರಿಣಾಮ ಬೀರುತ್ತದೆ, ಸ್ಥಳೀಯ ಆರ್ಥಿಕತೆಗೆ ಉತ್ತಮವಾದ ಭವಿಷ್ಯವನ್ನು ನೀಡುತ್ತದೆ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರ ಕ್ರೀಡಾ ಮೂಲಸೌಕರ್ಯಕ್ಕೆ ಒತ್ತು ನೀಡುತ್ತಿದ್ದು, ಯುವಕರಲ್ಲಿ ಕ್ರೀಡೆಯನ್ನು ಜನಪ್ರಿಯಗೊಳಿಸಲು ಮತ್ತು ಕ್ರೀಡಾ ಪ್ರತಿಭೆಯನ್ನು ಬೆಳೆಸಲು ಸಹಾಯ ಮಾಡುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.