ನವದೆಹಲಿ: ದೇಶದಾದ್ಯಂತ ಏಕಕಾಲದಲ್ಲಿ ರಾಷ್ಟ್ರೀಯ, ರಾಜ್ಯ ಮತ್ತು ಪಂಚಾಯತ್ ಚುನಾವಣೆಗಳನ್ನು ನಡೆಸಲು ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಚಿಂತನೆಯನ್ನು ಪರಿಶೀಲಿಸಲು ರಚಿಸಲಾದ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮತ್ತು ಇತರ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ, ಇಂದಿನ ಸಭೆಯ ಕಾರ್ಯಸೂಚಿಯನ್ನು ನಿರ್ಧರಿಸಲು ಶಾ ಮತ್ತು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕೋವಿಂದ್ ಅವರೊಂದಿಗೆ ಸಭೆ ನಡೆಸಿದರು.
ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳಲ್ಲದೆ, ಸಮಿತಿಯು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪರಿಶೀಲಿಸುತ್ತದೆ ಮತ್ತು ಚುನಾವಣೆಗಳನ್ನು ನಡೆಸಬಹುದಾದ ಚೌಕಟ್ಟು ಮತ್ತು ಸಮಯದ ಮಿತಿಯ ಬಗ್ಗೆ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡುತ್ತದೆ.
1967ರವರೆಗೆ ದೇಶಾದ್ಯಂತ ಏಕಕಾಲಕ್ಕೆ ಚುನಾವಣೆಗಳು ನಡೆಯುತ್ತಿತ್ತು. 1968-69ರಲ್ಲಿ ಕೆಲವು ರಾಜ್ಯಗಳ ಅಸೆಂಬ್ಲಿಗಳು ಅಕಾಲಿಕವಾಗಿ ವಿಸರ್ಜಿಸಲ್ಪಟ್ಟಿದ್ದರಿಂದ ಈ ಪದ್ಧತಿಯು ನಿಂತುಹೋಯಿತು. ಲೋಕಸಭೆಯು 1970 ರಲ್ಲಿ ಅದರ ವೇಳಾಪಟ್ಟಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಯಿತು. ಹೀಗಾಗಿ ಬೇರೆ ಬೇರೆ ಚುನಾವಣೆ ನಡೆಸಬೇಕಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.