ನವದೆಹಲಿ: ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ವೇಗ ಮತ್ತು ಪ್ರಮಾಣವು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಹೊಂದಿಕೆಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಮಧ್ಯಾಹ್ನ 9 ವಂದೇ ಭಾರತ್ ರೈಲುಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಮೋದಿ, ದೇಶವು ಇದೇ ರೀತಿಯ ಮೂಲಸೌಕರ್ಯ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಹೇಳಿದರು.
ಹೊಸ ವಂದೇ ಭಾರತ್ ರೈಲುಗಳು ದೇಶಾದ್ಯಂತ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ರೈಲುಗಳು ನವ ಭಾರತದ ಹೊಸ ಉಮೇದು ಮತ್ತು ಉತ್ಸಾಹವನ್ನು ತೋರಿಸುತ್ತವೆ ಎಂದು ಅವರು ಹೇಳಿದರು.
ದೇಶದಲ್ಲಿ 25 ವಂದೇ ಭಾರತ್ ರೈಲುಗಳು ಓಡುತ್ತಿವೆ ಮತ್ತು ಈಗ ಇನ್ನೂ ಒಂಬತ್ತು ರೈಲುಗಳನ್ನು ಸೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಈ ರೈಲುಗಳು ದೇಶದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ದಿನ ದೂರವಿಲ್ಲ ಎಂದರು. ವಂದೇ ಭಾರತ್ ರೈಲುಗಳ ಜನಪ್ರಿಯತೆ ನಿರಂತರವಾಗಿ ಹೆಚ್ಚುತ್ತಿದೆ ಮತ್ತು ಈಗಾಗಲೇ ಒಂದು ಕೋಟಿ ಹನ್ನೊಂದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಅದರಲ್ಲಿ ಪ್ರಯಾಣಿಸಿದ್ದಾರೆ ಎಂದು ಮೋದಿ ಹೇಳಿದರು.
ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ಹಲವಾರು ರೈಲು ನಿಲ್ದಾಣಗಳಿದ್ದು, ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಕೆಲಸ ನಡೆಯುತ್ತಿದೆ ಎಂದು ಅವರು ಹೇಳಿದರು. ಆಜಾದಿ ಕಾ ಅಮೃತ್ ಕಾಲ್ನಲ್ಲಿ ಅಭಿವೃದ್ಧಿಪಡಿಸುವ ಎಲ್ಲಾ ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ಗಳೆಂದು ಕರೆಯಲಾಗುವುದು ಎಂದು ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.