ನವದೆಹಲಿ: ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 2023 ರ ಏಷ್ಯನ್ ಗೇಮ್ಸ್ನಲ್ಲಿ ಇತಿಹಾಸವನ್ನು ಸೃಷ್ಟಿಸಿದೆ. ಚೊಚ್ಚಲ ಪ್ರದರ್ಶನದಲ್ಲೇ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. 2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಶ್ರೀಲಂಕಾ ತಂಡ ಈ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.
ಝೆಜಿಯಾಂಗ್ ಟೆಕ್ ವಿವಿ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತೀಯ ಮಹಿಳಾ ತಂಡ 20 ಓವರ್ಗಳಲ್ಲಿ 116 ರನ್ ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಶ್ರೀಲಂಕಾ ತಂಡಕ್ಕೆ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 97 ರನ್ ಗಳಿಸಲು ಮಾತ್ರ ಶಕ್ತವಾಯಿತು. ಇದರಿಂದ ಭಾರತ 19 ರನ್ಗಳ ಜಯ ಸಾಧಿಸಿ ಚಿನ್ನದ ಪದಕ್ಕೆ ಕೊರಳೊಡ್ಡಿತು.
2010 ರ ಏಷ್ಯನ್ ಗೇಮ್ಸ್ನಲ್ಲಿ ಪಾಕಿಸ್ತಾನ ಚಿನ್ನ ಗೆದ್ದರೆ, ಬಾಂಗ್ಲಾದೇಶ ಬೆಳ್ಳಿ ಹಾಗೂ ಜಪಾನ್ ಕಂಚಿನ ಪದಕ ಗೆದ್ದುಕೊಂಡಿತ್ತು. 2014ರಲ್ಲಿ ಪಾಕಿಸ್ತಾನ ಸತತ 2ನೇ ಬಾರಿ ಚಿನ್ನ ಗೆದ್ದರೆ, ಬಾಂಗ್ಲಾದೇಶ ಬೆಳ್ಳಿ ಹಾಗೂ ಶ್ರೀಲಂಕಾ ತಂಡ ಕಂಚಿನ ಪದಕಕ್ಕೆ ತೃಪ್ತಿಪಟ್ಟಿತ್ತು. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ಗೆ ತೆರಳಿದ ಭಾರತ ತಂಡ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದೆ.
🇮🇳 𝑯𝒊𝒔𝒕𝒐𝒓𝒚-𝒎𝒂𝒌𝒆𝒓𝒔!
The incredible women's cricket team of India strike GOLD for the first time ever, clinching a thrilling victory against Sri Lanka! 🥇🎉 Let's celebrate these remarkable women who've made India proud at #AsianGames2022! 🥳👏 #Cheer4India pic.twitter.com/0xUrGdgfbA
— SAI Media (@Media_SAI) September 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.