ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಮೂಲಗಳ ಪ್ರಕಾರ ಈ ಕರ್ನಾಟಕ ಬಂದ್ಗೆ 100 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಬಂದ್ನಿಂದ ರಾಜ್ಯ ಸರ್ಕಾರಕ್ಕೆ ನಷ್ಟವಾಗಲಿದ್ದು, ಬಂದ್ಗೆ ಮುಂದಾಗದಂತೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಆದರೂ ಸಂಘಟನೆಗಳು ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಮಾಡುವ ಅಚಲ ನಿರ್ಧಾರವನ್ನು ತೆಗೆದುಕೊಂಡಿವೆ ಎನ್ನಲಾಗಿದೆ.
ಡಿಸಿಎಂ ಶಿವಕುಮಾರ್ ಅವರು ಬಂದ್ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ” ಬಂದ್ ಮಾಡದಂತೆ ವಿನಂತಿಸುತ್ತೇನೆ. ಏಕೆಂದರೆ ವ್ಯಾಪಾರವು ಸ್ಥಗಿತಗೊಳ್ಳುವುದರಿಂದ ನಷ್ಟಕ್ಕೆ ಕಾರಣವಾಗುತ್ತದೆ. ಬೆಂಗಳೂರು, ಮಂಡ್ಯ ಮತ್ತು ಮೈಸೂರಿಗೆ ಕುಡಿಯುವ ನೀರು ಪೂರೈಕೆಗೆ ಸಾಕಷ್ಟು ನೀರು ಸಂಗ್ರಹವಾಗುವುದನ್ನು ಖಚಿತಪಡಿಸಿಕೊಳ್ಳುತ್ತೇವೆ. ಕರ್ನಾಟಕದ ರೈತರನ್ನು ಉಳಿಸುತ್ತೇವೆ” ಎಂದಿದ್ದಾರೆ.
ಇನ್ನೊಂದೆಡೆ ಬಂದ್ ಶಾಂತಿಯುತವಾಗಿರುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.