ನವದೆಹಲಿ; ದೇಶದ ಬುಡಕಟ್ಟು ಜನರ ಉನ್ನತಿಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿ ಬುಡಕಟ್ಟು ಸಮುದಾಯಗಳಿಗೆ ಬಜೆಟ್ನಲ್ಲಿ ಐದು ಪಟ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದರು.
‘ಮಿಷನ್ ಸ್ಕೂಲ್ಸ್ ಆಫ್ ಎಕ್ಸಲೆನ್ಸ್’ ಕಾರ್ಯಕ್ರಮದಡಿಯಲ್ಲಿ ಗುಜರಾತ್ನ ಛೋಟಾ ಉದೇಪುರ್ನ ಬೋಡೆಲಿಯಲ್ಲಿ 5200 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ನಂತರ ಪ್ರಧಾನಮಂತ್ರಿ ಅವರು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಈ ದೇಶದ ಬಡವರಲ್ಲಿ ಬಡವರಿಗೆ ಮನೆ, ನಲ್ಲಿ ನೀರು, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಸಿಗುತ್ತವೆ ಎಂದು ಸರ್ಕಾರ ಖಾತ್ರಿಪಡಿಸುತ್ತಿದೆ ಎಂದು ಮೋದಿ ಹೇಳಿದರು. ಬುಡಕಟ್ಟು ಪ್ರದೇಶಗಳಲ್ಲಿನ ಯುವಕರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯಗಳನ್ನು ಬಲಪಡಿಸುವತ್ತ ತಮ್ಮ ಸರ್ಕಾರ ಗಮನಹರಿಸುತ್ತಿದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ದೇಶದಲ್ಲಿ 14,000 ಪಿಎಂ ಶ್ರೀ ಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
ದೇಶದಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ವಿದ್ಯಾ ಸಮೀಕ್ಷಾ ಕೇಂದ್ರ ಸೇರಿದಂತೆ ಗುಜರಾತ್ ಸರ್ಕಾರದ ವಿವಿಧ ಉಪಕ್ರಮಗಳನ್ನು ಮೋದಿ ಶ್ಲಾಘಿಸಿದರು. ರಾಜ್ಯದಲ್ಲಿನ ಬಿಜೆಪಿ ಸರ್ಕಾರವು ರಾಜ್ಯದ ಬುಡಕಟ್ಟು ಪ್ರದೇಶದಲ್ಲಿ 25,000 ಹೊಸ ತರಗತಿ ಕೊಠಡಿಗಳು, ಐದು ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಎರಡು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದೆ ಎಂದು ಪ್ರಧಾನಿ ಹೇಳಿದರು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಕೌಶಲಾಭಿವೃದ್ಧಿ ಪ್ರಮುಖ ಅಂಶವಾಗಿದೆ ಎಂದು ಅವರು ಒತ್ತಿ ಹೇಳಿದರು. ನೆಲದ ಮಟ್ಟದಲ್ಲಿ ಕೌಶಲ್ಯ ಅಭಿವೃದ್ಧಿ ಸಂಪ್ರದಾಯವನ್ನು ಬಲಪಡಿಸಲು ಸರ್ಕಾರ ವಿಶ್ವಕರ್ಮ ಯೋಜನೆಯನ್ನು ತಂದಿದೆ ಎಂದು ಮೋದಿ ಹೇಳಿದರು. ಎಲ್ಲ ಕುಶಲಕರ್ಮಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.