ವಾಷಿಂಗ್ಟನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ವಾಷಿಂಗ್ಟನ್ನಲ್ಲಿ ಭೇಟಿಯಾಗಿ ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚಿಸಿದರು ಮತ್ತು 2+2 ಸಭೆಗೆ ಅಡಿಪಾಯ ಹಾಕಿದರು.
ಗಮನಾರ್ಹವೆಂದರೆ, ಭಾರತ-ಯುಎಸ್ 2+2 ಮಿನಿಸ್ಟ್ರಿಯಲ್ ಡೈಲಾಗ್ನ ಐದನೇ ಆವೃತ್ತಿಯನ್ನು ನವದೆಹಲಿಯಲ್ಲಿ ಆಯೋಜಿಸಲಾಗುವುದು ಎಂದು ಎಸ್.ಜೈಶಂಕರ್ ಘೋಷಿಸಿದ್ದಾರೆ.
ಜೈಶಂಕರ್ ಅವರು ಟ್ವಿಟ್ ಮಾಡಿ, “ನನ್ನ ಸ್ನೇಹಿತ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರನ್ನು ವಿದೇಶಾಂಗ ಇಲಾಖೆಯಲ್ಲಿ ಭೇಟಿಯಾಗಲು ಸಂತೋಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೂನ್ ಭೇಟಿಯ ನಂತರ ಇಲ್ಲಿ ವ್ಯಾಪಕ ಚರ್ಚೆ ನಡೆಸಲಾಗಿದೆ. ಅಲ್ಲದೆ ಜಾಗತಿಕ ಬೆಳವಣಿಗೆಗಳ ಕುರಿತು ಟಿಪ್ಪಣಿಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ನಮ್ಮ 2+2 ಸಭೆಯ ಅಡಿಪಾಯವನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದಿದ್ದಾರೆ.
ಸಭೆಯ ದಿನಾಂಕವನ್ನು ಅವರು ಬಹಿರಂಗಪಡಿಸದಿದ್ದರೂ, ನವೆಂಬರ್ ಮೊದಲಾರ್ಧದಲ್ಲಿ ಸಚಿವರ ಸಂವಾದ ನಡೆಯಲಿದೆ ಎಂದು ತಿಳಿದುಬಂದಿದೆ. ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಯುಎಸ್ ನಿಯೋಗವನ್ನು ಪ್ರತಿನಿಧಿಸುತ್ತಾರೆ. ಜೈಶಂಕರ್ ಮತ್ತು ರಾಜನಾಥ್ ಸಿಂಗ್ ಭಾರತೀಯ ನಿಯೋಗವನ್ನು ಮುನ್ನಡೆಸಲಿದ್ದಾರೆ.
Great to meet my friend US Secretary of State @SecBlinken at State Department today.
A wide ranging discussion, following up on PM @narendramodi’s June visit. Also exchanged notes on global developments.
Laid the groundwork of our 2+2 meeting very soon. pic.twitter.com/mOw9SIX1dO
— Dr. S. Jaishankar (@DrSJaishankar) September 28, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.