ಬೆಂಗಳೂರು: ಕರ್ನಾಟಕದ ಜೀವನದಿ ಕಾವೇರಿಯ ನೀರನ್ನು ಬರದ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ಗೆ ಬೆಳಗ್ಗೆಯಿಂದಲೇ ಉತ್ತಮ ಸ್ಪಂದನೆ ದೊರೆಯುತ್ತಿದೆ. ಅಲ್ಲಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ.
ರಾಜಧಾನಿ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ನಗರದ ಸೂಕ್ಷ್ಮ ಮತ್ತು ಪ್ರಮುಖ ಪ್ರದೇಶಗಳಲ್ಲಿ ಯಾವದೇ ಅಶಾಂತಿ ಸೃಷ್ಟಿಯಾಗದಂತೆ ಕಣ್ಗಾವಲು ಇಟ್ಟಿದ್ದಾರೆ. ಬೆಂಗಳೂರಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳ ಕೇಂದ್ರ ಭಾಗವಾಗಿರುವ ಕೆಆರ್ ಮಾರುಕಟ್ಟೆಯಲ್ಲಿ ವಿವಿಧ ಸಂಘಟನೆಗಳು ವಿಭಿನ್ನ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ಕಿವಿಗೆ ಚೆಂಡು ಹಾಕಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
ವಿಮಾನಗಳ ಹಾರಾಟಕ್ಕೂ ಬಂದ್ ಬಿಸಿ ತಟ್ಟಿದ್ದು 40 ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಂಡಿದೆ. ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿದೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿವೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್, ಓಲಾ, ಊಬರ್ ಸಂಚಾರ ಕೂಡ ಇಲ್ಲ. ಹೀಗಾಗಿ ಜನರ ಓಡಾಟ ವಿರಳವಾಗಿದ್ದು, ಬಂದ್ಗೆ ಕರೆ ಕೊಟ್ಟಿದ್ದರಿಂದ ಯಾರು ಇಂದಿನ ದಿನಕ್ಕೆ ಪ್ಲೈಟ್ ಬುಕ್ ಮಾಡಿಲ್ಲ. ಇನ್ನೂ ಕೆಲವರು ಬುಕ್ ಮಾಡಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದಿದ್ದರಿಂದ ಫ್ಲೈಟ್ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ.
#WATCH | Pro-Kannada outfits in Karnataka's Mandya continue their protest over the Cauvery water release to Tamil Nadu. pic.twitter.com/96SwE38HF6
— ANI (@ANI) September 29, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.