ನವದೆಹಲಿ: ಇಂದು ವಿಶ್ವ ಹೃದಯ ದಿನ. ಪುಟ್ಟ ಹೃದಯದ ಆರೋಗ್ಯದ ಬಗ್ಗೆ ನಮ್ಮಲ್ಲಿ ಜಾಗೃತಿಯನ್ನು ಮೂಡಿಸುವ ದಿನ. ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ.
ಜಗತ್ತಿನಲ್ಲಿ 18 ಲಕ್ಷಕ್ಕೂ ಅಧಿಕ ಮಂದಿ ಪ್ರತಿವರ್ಷ ಹೃದಯ ಸಂಬಂಧಿ ಸಮಸ್ಯೆಗಳಿಂದ ಸಾವನ್ನಪ್ಪುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದು ಅತ್ಯಂತ ಕಳವಳಕಾರಿಯಾದ ಸಂಗತಿ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತಗಳಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕವನ್ನೇ ಸೃಷ್ಟಿ ಮಾಡಿದೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ ಜಾಗೃತಿಗಳು ಮೂಡಬೇಕಿದೆ.
999ರಲ್ಲಿ ಮೊದಲ ಬಾರಿ ವಿಶ್ವ ಹೃದಯ ದಿನವನ್ನು ಆಚರಿಸಲಾಗಿತ್ತು. ವರ್ಲ್ಡ್ ಹಾರ್ಟ್ ಫೆಡರೇಶನ್, ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದೊಂದಿಗೆ ಈ ದಿನದ ಆಚರಣೆಗೆ ಕರೆ ನೀಡಿತ್ತು. 1997ರಿಂದ 2011ರ ವರೆಗೆ ವರ್ಲ್ಡ್ ಹಾರ್ಟ್ ಫೆಡರೇಶನ್ನ ಅಧ್ಯಕ್ಷರಾಗಿದ್ದ ಆಂಟೊನಿ ಬೇಯಸ್ ಡಿ ಕೂನಾ ಅವರು ಈ ಆಚರಣೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದರು, ಅಲ್ಲದೆ ಅದನ್ನು ಕಾರ್ಯಗತಗೊಳಿಸಿದರು. ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರವನ್ನು ವಿಶ್ವ ಹೃದಯ ದಿನ ಎಂದು ಆಚರಿಸಲು ನಿರ್ಧರಿಸಲಾಗಿತ್ತು. ಈ ದಿನದ ಆಚರಣೆಯನ್ನು ಜಾರಿಗೊಳಿಸಿದ ಬಳಿಕ 2000ರ ಸೆಪ್ಟೆಂಬರ್ 24ರಂದು ಮೊದಲ ಬಾರಿ ವಿಶ್ವ ಹೃದಯ ದಿನವನ್ನು ಆಚರಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.