ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 154 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಈ ಜಾಗದಲ್ಲಿ ಜನವರಿ 31, 1948 ರಂದು ಗಾಂಧೀಜಿಯವರ ಅಂತ್ಯಕ್ರಿಯೆ ನಡೆದಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಮಹಾತ್ಮ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ದೆಹಲಿಯ ರಾಜ್ಘಾಟ್ನಲ್ಲಿ ಗೌರವ ಸಲ್ಲಿಸಿದರು. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ. ಅಲ್ಲದೇ ಗಾಂಧಿಯವರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಕರೆ ನೀಡಿದ್ದಾರೆ.
“ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿಯವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಹಾದಿಯನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ. ಅವರ ಆಲೋಚನೆಗಳು ಪ್ರತಿಯೊಬ್ಬ ಯುವಕರಿಗೆ ಅವರು ಕನಸು ಕಂಡ ಬದಲಾವಣೆಯ ಏಜೆಂಟ್ ಆಗಲು ಸಾಧ್ಯವಾಗಲಿ, ಎಲ್ಲಾ ಕಡೆ ಏಕತೆ ಮತ್ತು ಸೌಹಾರ್ದತೆಯನ್ನು ಪೋಷಿಸಲಿ” ಎಂದು ಪ್ರಧಾನಿ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
I bow to Mahatma Gandhi on the special occasion of Gandhi Jayanti. His timeless teachings continue to illuminate our path. Mahatma Gandhi’s impact is global, motivating the entire humankind to further the spirit of unity and compassion. May we always work towards fulfilling his…
— Narendra Modi (@narendramodi) October 2, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.