ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ನಿಜಾಮಾಬಾದ್ನಲ್ಲಿ 8000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.
ಮನೋಹರಾಬಾದ್ ಮತ್ತು ಸಿದ್ದಿಪೇಟ್ ಅನ್ನು ಸಂಪರ್ಕಿಸುವ ಹೊಸ ರೈಲು ಮಾರ್ಗ ಮತ್ತು ತೆಲಂಗಾಣದ ಧರ್ಮಾಬಾದ್-ಮನೋಹರಾಬಾದ್ ಮತ್ತು ಮಹಬೂಬ್ನಗರ-ಕರ್ನೂಲ್ ನಡುವಿನ ವಿದ್ಯುದ್ದೀಕರಣ ಯೋಜನೆ ಸೇರಿದಂತೆ ರೈಲು ಯೋಜನೆಗಳನ್ನು ಪ್ರಧಾನಿ ಇಂದು ರಾಷ್ಟ್ರಕ್ಕೆ ಸಮರ್ಪಿಸಿದರು.
ರಾಮಗುಂಡಂನಲ್ಲಿ ಎನ್ಟಿಪಿಸಿಯ ತೆಲಂಗಾಣ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್ನ 1 ನೇ ಹಂತದ ಮೊದಲ 800 ಮೆಗಾವ್ಯಾಟ್ ಘಟಕವನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ವಿದ್ಯುತ್ ಸ್ಥಾವರವು 85 ಪ್ರತಿಶತದಷ್ಟು ವಿದ್ಯುತ್ ಅನ್ನು ರಾಜ್ಯದಲ್ಲಿಯೇ ಬಳಸಿಕೊಳ್ಳುತ್ತದೆ ಮತ್ತು ಉತ್ತರ-ದಕ್ಷಿಣ ಗ್ರಿಡ್ ಸಂಪರ್ಕವನ್ನು ಸುಧಾರಿಸುತ್ತದೆ. ಪ್ರ
ಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ 20 ಜಿಲ್ಲಾ ಕೇಂದ್ರಗಳಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಪೆಡಪ್ಪಲ್ಲಿ ಹೊಸ ವಿದ್ಯುತ್ ಸ್ಥಾವರವು ದೇಶದ ಅತ್ಯಂತ ಆಧುನಿಕ ಸ್ಥಾವರವಾಗಿದ್ದು, ಶೀಘ್ರದಲ್ಲೇ 2 ನೇ ಹಂತದಲ್ಲಿ ಮತ್ತೊಂದು ವಿದ್ಯುತ್ ಸ್ಥಾವರವನ್ನು ಹೊಂದಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.