ನವದೆಹಲಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಪರಿಚಯಿಸುವ ಮೂಲಕ ಕೇಂದ್ರ ಸರ್ಕಾರವು ರೈಲ್ವೇಯಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿ ಮಾಡಿದೆ. ವಂದೇ ಭಾರತ್ ಪ್ರಯಾಣಿಕರ ಪ್ರಯಾಣದ ಸಮಯವನ್ನು ಉಳಿಸುವುದು ಮಾತ್ರವಲ್ಲದೇ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಆರಾಮದಾಯಕ ಪ್ರಯಾಣದ ಅನುಭವವನ್ನೂ ನೀಡುತ್ತಿದೆ. ಹೀಗಾಗಿ ಪ್ರಯಾಣಿಕರಿಗೆ ಈಗ ವಂದೇ ಭಾರತ್ ರೈಲು ಅಚ್ಚುಮೆಚ್ಚಿನ ರೈಲಾಗಿದೆ. ಇದೀಗ ಭಾರತೀಯ ರೈಲ್ವೆ ಈಗ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮತ್ತಷ್ಟು ಅತ್ಯಾಧುನಿಕ ಸೌಲಭ್ಯಗಳನ್ನು ಸೇರ್ಪಡೆಗೊಳಿಸುತ್ತಿದೆ. ಅತ್ಯಾಧುನಿಕ ಸ್ಲೀಪರ್ ಕೋಚ್ಗಳು ಮುಂದಿನ ವರ್ಷ ಕಾರ್ಯಾಚರಿಸಲಿve.
ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ವಂದೇ ಭಾರತ್ ಸ್ಲೀಪರ್ ಕೋಚ್ಗಳ ಪೋಟೋಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ಹೊಸ ವಂದೇ ಭಾರತ್ ರೈಲುಗಳು ಮುಂದಿನ ವರ್ಷದಿಂದ ಸೇವೆಗೆ ಲಭ್ಯವಾಗಲಿವೆ. ಇವು ಪ್ರಯಾಣಿಕರಿಗೆ ವೇಗದ ಜೊತೆ ಆರಾಮದಾಯಕ ಪ್ರಯಾಣದ ಅನುಭವ ನೀಡಲಿದೆ.
Concept train – Vande Bharat (sleeper version)
Coming soon… early 2024 pic.twitter.com/OPuGzB4pAk
— Ashwini Vaishnaw (@AshwiniVaishnaw) October 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.