ನ್ಯೂಯಾರ್ಕ್: ಇರಾನ್ನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧದ ಹೋರಾಟಕ್ಕಾಗಿ ಜೈಲಿನಲ್ಲಿರುವ ಮಾನವ ಹಕ್ಕುಗಳ ಕಾರ್ಯಕರ್ತ ನರ್ಗೆಸ್ ಮೊಹಮ್ಮದಿ ಅವರಿಗೆ 2023 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.
“ನಾರ್ವೇಜಿಯನ್ ನೊಬೆಲ್ ಸಮಿತಿಯು ಇರಾನ್ನಲ್ಲಿ ಮಹಿಳೆಯರ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಎಲ್ಲರಿಗೂ ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯವನ್ನು ಉತ್ತೇಜಿಸುವ ಹೋರಾಟಕ್ಕಾಗಿ ನರ್ಗೆಸ್ ಮೊಹಮ್ಮದಿ ಅವರಿಗೆ 2023 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ” ಎಂದು ಅಧಿಕಾರಿಗಳು ಘೋಷಿಸಿದ್ದಾರೆ.
ನೊಬೆಲ್ ಪ್ರಶಸ್ತಿಯು ಅಲ್ಫ್ರೆಡ್ ನೊಬೆಲ್ರ ಮರಣೋತ್ತರ ಉಯಿಲಿನ ಪ್ರಕಾರ ವ್ಯಕ್ತಿಗಳ ಮತ್ತು ಸಂಘಸಂಸ್ಥೆಗಳ ಅತ್ಯುಚ್ಚ ಜನೋಪಕಾರಿ ಸಾಧನೆ, ಸಂಶೋಧನೆ, ಅವಿಷ್ಕಾರ ಮತ್ತು ಸೇವೆಗಳಿಗೆ ನೀಡಲ್ಪಡುತ್ತಿರುವ ಪುರಸ್ಕಾರ. ಇವನ್ನು ಕೆಳಗೆ ನಮೂದಿಸಿರುವ ವಿಭಾಗಗಳಿಗೆ ಪ್ರದಾನಿಸಲಾಗುತ್ತದೆ. ನೊಬೆಲ್ ಪ್ರಶಸ್ತಿಯನ್ನು ಜಗತ್ತಿನ ಅತ್ಯುಚ್ಚ ಸನ್ಮಾನ ಎಂದು ಪರಿಗಣಿಸಲಾಗಿದೆ.
BREAKING NEWS
The Norwegian Nobel Committee has decided to award the 2023 #NobelPeacePrize to Narges Mohammadi for her fight against the oppression of women in Iran and her fight to promote human rights and freedom for all.#NobelPrize pic.twitter.com/2fyzoYkHyf— The Nobel Prize (@NobelPrize) October 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.