ನವದೆಹಲಿ: ಚೀನಾದಿಂದ ದೇಣಿಗೆ ಪಡೆದು ಭಾರತದ ವಿರುದ್ಧ ಪಿತೂರಿ ಮಾಡಿದ ಆರೋಪ ಹೊತ್ತಿರುವ ನ್ಯೂಸ್ಕ್ಲಿಕ್ ಪೋರ್ಟಲ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಎಫ್ಐಆರ್ ಪ್ರಕಾರ ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ದೇಶದ ವಿರುದ್ಧ ಅಸಮಾಧಾನ ಸೃಷ್ಟಿಸಲು ಚೀನಾದಿಂದ ಹೆಚ್ಚಿನ ಪ್ರಮಾಣದ ಹಣ ನ್ಯೂಸ್ಕ್ಲಿಕ್ಗೆ ಹರಿದು ಬಂದಿದೆ.
ಕೋರ್ಟ್ ಆದೇಶದ ನಂತರ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ನ ಪ್ರತಿಯನ್ನು ಪೋರ್ಟಲ್ಗೆ ಸಲ್ಲಿಸಿದ್ದು, ಅದರಲ್ಲಿ ಕ್ಸಿಯೋಮಿ, ವಿವೋ ಸೇರಿದಂತೆ ಚೀನಾದ ದೊಡ್ಡ ದೊಡ್ಡ ಟೆಲಿಕಾಂ ಕಂಪನಿಗಳಿಂದ ನಕಲಿ ಸುದ್ದಿ ಪ್ರಕಟಿಸಲು ನ್ಯೂಸ್ಕ್ಲಿಕ್ ಗೆ ಹಣ ಪಾವತಿಯಾಗಿದೆ ಎಂದು ಆರೋಪಿಸಲಾಗಿದೆ.
“ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ಮತ್ತು ಭಾರತದ ವಿರುದ್ಧ ಅಸಮಾಧಾನ ಸೃಷ್ಟಿಸುವ ಪಿತೂರಿಯ ಭಾಗವಾಗಿ, ಚೀನಾದಿಂದ ದೊಡ್ಡ ಪ್ರಮಾಣದ ಹಣವನ್ನು ಸ್ವೀಕರಿಸಲಾಗಿದೆ ಮತ್ತು ಅದನ್ನು ಮರೆಮಾಚಲು ದೇಶದ ನೀತಿಗಳು, ಭಾರತದ ಅಭಿವೃದ್ಧಿ ಯೋಜನೆಗಳನ್ನು ಟೀಕಿಸುವಂತಹ ಪಾವತಿಸಿದ ಸುದ್ದಿಗಳನ್ನು ಉದ್ದೇಶಪೂರ್ವಕವಾಗಿ ಹರಡಲಾಯಿತು ಎಂದು ಎಫ್ಐಆರ್ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.