ನವದೆಹಲಿ: ನಕ್ಸಲ್ ವಾದ “ಮಾನವ ಕುಲಕ್ಕೆ ಶಾಪ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಎಡಪಂಥೀಯ ಉಗ್ರವಾದದ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸುವ ಕೆಲವು ಗಂಟೆಗಳ ಮೊದಲು ಶಾ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರವು ಎಡಪಂಥೀಯ ಉಗ್ರವಾದವನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಬೇರುಸಹಿತ ಕಿತ್ತೊಗೆಯಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
ನಕ್ಸಲಿಸಂ ಮಾನವೀಯತೆಗೆ ಶಾಪವಾಗಿದೆ, ಅದನ್ನು ಅದರ ಎಲ್ಲಾ ರೂಪಗಳಲ್ಲಿ ಬೇರುಸಹಿತ ಕಿತ್ತುಹಾಕಲು ನಾವು ಸಂಕಲ್ಪ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಯನ್ನು ಈಡೇರಿಸುವ ನಮ್ಮ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಲು ನಾನು ಇಂದು ದೆಹಲಿಯಲ್ಲಿ ಎಡಪಂಥೀಯ ಉಗ್ರವಾದದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಲು ಎದುರು ನೋಡುತ್ತಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.
ಇಂದು ನಡೆದ ಸಭೆಯಲ್ಲಿ ಬಿಹಾರ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಮಧ್ಯಪ್ರದೇಶ, ಜಾರ್ಖಂಡ್, ಆಂಧ್ರಪ್ರದೇಶ, ಛತ್ತೀಸ್ಗಢ, ಪಶ್ಚಿಮ ಬಂಗಾಳ ಮತ್ತು ಕೇರಳದ ಮುಖ್ಯಮಂತ್ರಿಗಳು, ಗೃಹ ಸಚಿವರು ಅಥವಾ ಅವರ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಭಾಗಿಯಾಗಿದ್ದಾರೆ.
Naxalism is a curse to humanity and we are resolved to uproot it in all its forms.
I look forward to chairing the Review Meeting on Left Wing Extremism (LWE) in New Delhi today to further our efforts to fulfil PM @narendramodi Ji’s vision of an LWE-free nation. https://t.co/l3bEtP0Vv3
— Amit Shah (@AmitShah) October 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.