ಭೋಪಾಲ್: 2023 ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನವೆಂಬರ್ 17 ರಂದು ಒಂದೇ ಹಂತದಲ್ಲಿ ನಡೆಯಲಿದೆ, ನಂತರ ನವೆಂಬರ್ 23 ರಂದು ರಾಜಸ್ಥಾನದಲ್ಲಿ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಘೋಷಿಸಿದೆ.
ಈ ವರ್ಷದ ಅಂತಿಮ ಸುತ್ತಿನ ಚುನಾವಣೆಯು ನವೆಂಬರ್ 7 ರಂದು ಮಿಜೋರಾಂ ಮತದಾನದೊಂದಿಗೆ ಪ್ರಾರಂಭವಾಗುತ್ತದೆ.
ಛತ್ತೀಸ್ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಿಜೋರಾಂನಲ್ಲಿ ನವೆಂಬರ್ 7ರಂದು ಮತ್ತು ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಮತದಾನ ನಡೆಯಲಿದೆ.
ಸರಿಸುಮಾರು 16.1 ಕೋಟಿ ಜನರು ಈ ಚುನಾವಣೆಯಲ್ಲಿ ತಮ್ಮ ಮತಗಳನ್ನು ಚಲಾಯಿಸಲಿದ್ದಾರೆ, 2024 ರ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ನಡೆಯುತ್ತಿರುವ ಕಾರಣ ಇದನ್ನು ಸೆಮಿಫೈನಲ್ ಎಂದೇ ಬಣ್ಣಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.