ನ್ಯೂಯಾರ್ಕ್: ಇಂದು ಅರ್ಥಶಾಸ್ತ್ರ ವಿಭಾಗದಲ್ಲಿ ನೋಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಕ್ಲಾಡಿಯಾ ಗೋಲ್ಡಿನ್ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ.
ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅರ್ಥಶಾಸ್ತ್ರಕ್ಕೆ 1969ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ.
92 ಪುರಸ್ಕೃತರ ಪೈಕಿ 25 ಮಂದಿ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್ ಪಾತ್ರರಾಗಿದ್ದಾರೆ. ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 2ರಿಂದ ನೀಡಲಾಗುತ್ತಿದೆ.
ಇನ್ನು ಅರ್ಥಶಾಸ್ತ್ರ ಕ್ಷೇತ್ರಕ್ಕೆ ಪ್ರಶಸ್ತಿ ಘೋಷಿಸುವ ಮೂಲಕ ಈ ವರ್ಷದ ಕೊನೆಯ ನೋಬೆಲ್ ಘೋಷಣೆಯಾಗಿದೆ. ಔಷಧ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಮತ್ತು ಶಾಂತಿಗೆ ಸಂಬಂಧಿಸಿದಂತೆ ಈ ವಾರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿತ್ತು.
BREAKING NEWS
The Royal Swedish Academy of Sciences has decided to award the 2023 Sveriges Riksbank Prize in Economic Sciences in Memory of Alfred Nobel to Claudia Goldin “for having advanced our understanding of women’s labour market outcomes.”#NobelPrize pic.twitter.com/FRAayC3Jwb— The Nobel Prize (@NobelPrize) October 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.