ನವದೆಹಲಿ: ‘ಪ್ಯಾಲೆಸ್ತೀನ್ ಹಕ್ಕು’ಗಳನ್ನು ಬೆಂಬಲಿಸುವ ಕಾಂಗ್ರೆಸ್ ನಿರ್ಣಯಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಕಾಂಗ್ರೆಸ್ ಹೇಳಿಕೆಯು ಪಾಕಿಸ್ತಾನ ಮತ್ತು ತಾಲಿಬಾನ್ ಹೇಳಿಕೆಗಳೊಂದಿಗೆ ಹೋಲಿಕೆಯನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ.
ಟ್ವಿಟ್ ಮಾಡಿರುವ ಶರ್ಮಾ ಮೂರು, ಕಾಂಗ್ರೆಸ್ ಮತ್ತು ಪಾಕಿಸ್ಥಾನ, ತಾಲಿಬಾನ್ ಹೇಳಿಕೆಗಳಿಗೆ ನಡುವೆ ಮೂರು ಸಾಮ್ಯತೆಗಳಿವೆ. ಅದೆಂದರೆ “ಹಮಾಸ್ ಅನ್ನು ಖಂಡಿಸಬೇಡಿ, ಇಸ್ರೇಲ್ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮತ್ತು ಒತ್ತೆಯಾಳುಗಳಾಗಿರುವ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಮೌನವಾಗಿರಿ” ಎಂಬುದು.
ತುಷ್ಟೀಕರಣದ ರಾಜಕಾರಣಕ್ಕೆ ರಾಷ್ಟ್ರದ ಹಿತಾಸಕ್ತಿಯನ್ನು ಬಲಿಕೊಡುವುದು ಕಾಂಗ್ರೆಸ್ನ ಡಿಎನ್ಎಯಲ್ಲಿದೆ ಎಂದು ಆರೋಪಿಸಿದರು.
ಸೋಮವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅಂಗೀಕರಿಸಿದ ನಿರ್ಣಯವು, “ಪ್ಯಾಲೆಸ್ತೀನ್ ಜನರ ಭೂಮಿ, ಸ್ವ-ಆಡಳಿತ ಮತ್ತು ಘನತೆ ಮತ್ತು ಗೌರವದಿಂದ ಬದುಕುವ ಹಕ್ಕುಗಳಿಗಾಗಿನ ದೀರ್ಘಕಾಲದ ಹೋರಾಟಕ್ಕೆ ಬೆಂಬಲವನ್ನು ಹೊಂದಿದೆ ಎಂದು ಹೇಳಿದೆ. ಅಲ್ಲದೇ ಇಸ್ರೇಲಿ ಪಡೆಗಳು ಮತ್ತು ಹಮಾಸ್ ಭಯೋತ್ಪಾದಕರ ನಡುವೆ ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿದೆ.
Congress’s resolution has striking similarities with statements of Pakistan & Taliban
All 3
❌Do not condemn Hamas
❌Do not deplore terror attack on Israel
❌Silent on hostages – women & childrenSacrificing the nation’s interest to politics of appeasement is in Cong’s DNA. pic.twitter.com/9ykMvQk4WL
— Himanta Biswa Sarma (@himantabiswa) October 11, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.