ನವದೆಹಲಿ: ಭಾರೀ ಮದುವೆಗಳು ನಿಗದಿಯಾಗಿರುವ ಕಾರಣ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕಗಳನ್ನು ಪರಿಷ್ಕರಿಸಲಾಗಿದೆ ಎಂದು ಭಾರತ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ. ಈ ಹಿಂದೆ ನವೆಂಬರ್ 23 ರಂದು ಇಲ್ಲಿ ಮತದಾನ ಮಾಡಲು ನಿರ್ಧರಿಸಲಾಗಿತ್ತು, ಈಗ ಎರಡು ದಿನಗಳ ನಂತರ ನವೆಂಬರ್ 25 ರಂದು ಮತದಾನವನ್ನು ನಡೆಸಲಿದೆ.
ಜೋಧ್ಪುರ ಬಿಜೆಪಿ ಸಂಸದ ಪಿಪಿ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಮತ್ತು ಹಲವಾರು ಮಾಧ್ಯಮ ವೇದಿಕೆಗಳಲ್ಲಿ ಜನರು ಚುನಾವಣಾ ಆಯೋಗವು ಆ ದಿನದಂದು ದೊಡ್ಡ ಪ್ರಮಾಣದ ಮದುವೆ ಅಥವಾ ಸಾಮಾಜಿಕ ಸಮಾರಂಭಗಳು ನಿಗದಿಯಾಗಿರುವುದನ್ನು ಪರಿಗಣಿಸಿ ಮತದಾನದ ದಿನಾಂಕವನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದವು.
ಮದುವೆಯ ಸಮಾರಂಭ ಹೆಚ್ಚಿನ ಸಂಖ್ಯೆಯ ಜನರಿಗೆ ಅನಾನುಕೂಲತೆಯನ್ನು ಉಂಟುಮಾಡಬಹುದು, ವಿವಿಧ ವ್ಯವಸ್ಥಾಪನಾ ಸಮಸ್ಯೆಗಳನ್ನು ಉಂಟುಮಾಡಬಹುದು ಮತ್ತು ಮತದಾನದಲ್ಲಿ ಕಡಿಮೆ ಮತದಾರರ ಭಾಗವಹಿಸುವಿಕೆಗೆ ಕಾರಣವಾಗಬಹುದು ಎಂಬ ಬಗ್ಗೆ ಚರ್ಚೆಗಳು ನಡೆದಿತ್ತು.
ಈ ಅಂಶಗಳು ಮತ್ತು ಪ್ರಾತಿನಿಧ್ಯಗಳನ್ನು ಪರಿಗಣಿಸಿದ ಆಯೋಗವು ನವೆಂಬರ್ 23 ರಿಂದ ನವೆಂಬರ್ 25 ಕ್ಕೆ ಮತದಾನದ ದಿನಾಂಕವನ್ನು ಬದಲಾಯಿಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.