ನವದೆಹಲಿ: ಭಾರತದ ಆರ್ಥಿಕತೆ ವಿಸ್ತಾರವಾಗುತ್ತಿದ್ದು, ಭಾರತದಲ್ಲಿ ನಿರುದ್ಯೋಗ ವೇಗವಾಗಿ ಕಡಿಮೆಯಾಗುತ್ತಿರುವುದರಿಂದ ಯುವಕರಿಗೆ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.
ಕೌಶಲ್ ದೀಕ್ಷಾಂತ್ ಸಮರೋಹ್ 2023 ರಲ್ಲಿ ವರ್ಚುವಲ್ ಭಾಷಣ ಮಾಡಿದ ಪ್ರಧಾನಮಂತ್ರಿಯವರು, ಭಾರತದಲ್ಲಿ ಉದ್ಯೋಗ ಸೃಷ್ಟಿಯು ಹೊಸ ಎತ್ತರವನ್ನು ತಲುಪಿದೆ ಮತ್ತು ಇತ್ತೀಚಿನ ಸಮೀಕ್ಷೆಯ ಪ್ರಕಾರ ಭಾರತದಲ್ಲಿ ನಿರುದ್ಯೋಗ ದರವು ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟದಲ್ಲಿದೆ ಎಂದು ಹೇಳಿದರು.
ಭಾರತದ ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡರಲ್ಲೂ ನಿರುದ್ಯೋಗವು ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಗಮನಿಸಿದ ಪ್ರಧಾನಿ ಮೋದಿ, ಅಭಿವೃದ್ಧಿಯ ಪ್ರಯೋಜನಗಳು ಹಳ್ಳಿಗಳು ಮತ್ತು ನಗರಗಳೆರಡನ್ನೂ ಸಮಾನವಾಗಿ ತಲುಪುತ್ತಿವೆ ಮತ್ತು ಇದರ ಪರಿಣಾಮವಾಗಿ ಹೊಸ ಅವಕಾಶಗಳು ಹಳ್ಳಿಗಳು ಮತ್ತು ನಗರಗಳಲ್ಲಿ ಸಮಾನವಾಗಿ ಹೆಚ್ಚುತ್ತಿವೆ ಎಂದು ಒತ್ತಿ ಹೇಳಿದರು.
ಅವರು ಭಾರತದ ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯಲ್ಲಿ ಅಭೂತಪೂರ್ವ ಹೆಚ್ಚಳವನ್ನು ಶ್ಲಾಘಿಸಿದರು ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಕಳೆದ ವರ್ಷಗಳಲ್ಲಿ ಪ್ರಾರಂಭಿಸಲಾದ ಯೋಜನೆಗಳು ಮತ್ತು ಅಭಿಯಾನಗಳಿಗೆ ಮನ್ನಣೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.