ನವದೆಹಲಿ: ಇಸ್ರೇಲ್ ಮೇಲೆ ನಡೆದಿರುವುದು ಭಯೋತ್ಪಾದಕ ದಾಳಿ ಎನ್ನುವ ಮೂಲಕ ಭಾರತದ ವಿದೇಶಾಂಗ ಸಚಿವಾಲಯವಯ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಇಸ್ರೇಲ್ ನೆಲದಲ್ಲಿ ಇರುವ ಎಲ್ಲ ಭಾರತೀಯರೂ ಸುರಕ್ಷಿತವಾಗಿ ಇದ್ದಾರೆ ಎಂದು ಖಚಿತಪಡಿಸಿದೆ. ಅಲ್ಲದೇ ಇಸ್ರೇಲ್ನಲ್ಲಿ ಇರುವ ಭಾರತೀಯರನ್ನು ತವರಿಗೆ ವಾಪಸ್ ಕರೆತರಲು ಮೊದಲ ವಿಮಾನವು ಗುರುವಾರ ರಾತ್ರಿ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ತಲುಪಲಿದೆ.
ಶುಕ್ರವಾರ ಬೆಳಗ್ಗೆ ಈ ವಿಮಾನ ಭಾರತಕ್ಕೆ ವಾಪಸ್ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ. ಯುದ್ಧಗ್ರದಿಂದ ತತ್ತರಗೊಂಡಿರುವ ಇಸ್ರೇಲ್ನಲ್ಲಿ ಇರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರವು ಆಪರೇಷನ್ ಅಜಯ್ ಆರಂಭಿಸಿದೆ. ಇಸ್ರೇಲ್ನಲ್ಲಿ ಇರುವ ಪ್ರತಿಯೊಬ್ಬ ಭಾರತೀಯನನ್ನೂ ತವರಿಗೆ ಸುರಕ್ಷಿತವಾಗಿ ಕರೆತರಲು ಭಾರತೀಯ ವಿದೇಶಾಂಗ ಇಲಾಖೆ ಪಣ ತೊಟ್ಟಿದ್ದು, ಈವರೆಗೆ ಯಾವೊಬ್ಬ ಭಾರತೀಯನೂ ಇಸ್ರೇಲ್ನಲ್ಲಿ ಸಾವನ್ನಪ್ಪಿಲ್ಲ ಎಂದು ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.