ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಗುರುವಾರ ಅವರು ಜಮ್ಮುವಿನಲ್ಲಿ ಇರುವ ಪ್ರಸಿದ್ಧ ವೈಷ್ಣೋದೇವಿಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ದೇಗುಲ ಭೇಟಿಯ ಬಳಿಕ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ದೇವಾಲಯದ ಸ್ಕೈವಾಕ್ ಯೋಜನೆ ಮತ್ತು ಮರುರೂಪಿಸಲಾದ ಪಾರ್ವತಿ ಭವನವನ್ನು ಉದ್ಘಾಟಿಸಿದರು.
“ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪವಿತ್ರ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು ಮತ್ತು ಸ್ಕೈವಾಕ್ ಅನ್ನು ಉದ್ಘಾಟಿಸಿದರು” ಎಂದು ರಾಷ್ಟ್ರಪತಿ ಭವನ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಾಷ್ಟ್ರಪತಿ ಮುರ್ಮು ಅವರ ಜೊತೆಗಿದ್ದರು. 200 ಮೀಟರ್ ನ ಸ್ಕೈವಾಕ್ ಯಾತ್ರಿಕರ ಪ್ರಯಾಣವನ್ನು ಸುಗಮಗೊಳಿಸುತ್ತದೆ. ಇದು ಪಾರ್ವತಿ ಭವನ ಮತ್ತು ದೇಗುಲಕ್ಕೆ ಭೇಟಿ ನೀಡಿದ ನಂತರ ಹಿಂದಿರುಗುವ ಮಾರ್ಗವನ್ನು ಪ್ರತ್ಯೇಕಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
President Droupadi Murmu visited the holy Mata Vaishno Devi Shrine and inaugurated Skywalk and remodeled Parvati Bhavan to facilitate the journey of pilgrims. pic.twitter.com/TyQpOKtia5
— President of India (@rashtrapatibhvn) October 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.