ನವದೆಹಲಿ: ಆಪರೇಷನ್ ಅಜಯ್ ಅಡಿ ಯುದ್ಧಭೂಮಿ ಇಸ್ರೇಲ್ನಿಂದ ಭಾರತೀಯರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಇಸ್ರೇಲ್ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ನಿನ್ನೆ ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯರನ್ನು ಸಂಘರ್ಷ ಪೀಡಿತ ದೇಶದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು. ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಭಾರತೀಯರು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜಕುಮಾರ್ ರಂಜನ್ ಸಿಂಗ್ ಬರಮಾಡಿಕೊಂಡರು.
ಇದಕ್ಕೂ ಮುನ್ನಾ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ 235 ಭಾರತೀಯರನ್ನು ಹೊತ್ತ ವಿಮಾನ ಇಸ್ರೇಲಿನ ಟೆಲ್ ಅವೀವ್ ನಿಂದ ಟೇಕ್ ಆಫ್ ಆಗುತ್ತಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾಹಿತಿ ಹಂಚಿಕೊಂಡಿದ್ದರು.
ಇಸ್ರೇಲ್ನಿಂದ ಸಿಲುಕಿರುವ ನಾಗರಿಕರನ್ನು ಮರಳಿ ಕರೆತರಲು ಸರ್ಕಾರ ಅ.11ರಂದು ‘ಆಪರೇಷನ್ ಅಜಯ್’ ಕಾರ್ಯಾಚರಣೆ ಪ್ರಾರಂಭಿಸಿತು. ಅ.7ರಂದು ಯುದ್ಧ ಪ್ರಾರಂಭವಾದಾಗ ಏರ್ ಇಂಡಿಯಾ ಮತ್ತು ಇತರ ಏರ್ಲೈನ್ಸ್ ತನ್ನ ಎಲ್ಲಾ ವಾಣಿಜ್ಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದ ನಂತರ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ವಿಶೇಷ ಚಾರ್ಟರ್ಡ್ ವಿಮಾನಗಳು ಭಾರತೀಯರನ್ನು ಮರಳಿ ಕರೆತರುತ್ತಿವೆ.
Flight #2 carrying 235 Indian nationals takes off from Tel Aviv. pic.twitter.com/avrMHAJrT4
— Dr. S. Jaishankar (@DrSJaishankar) October 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.