ನವದೆಹಲಿ: ಇಂದು ಭಾರತದ ನಾಗಪಟ್ಟಣಂನಿಂದ ಶ್ರೀಲಂಕಾಕ್ಕೆ ಪ್ರಯಾಣಿಕ ದೋಣಿ ಸೇವೆಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾಗಪಟ್ಟಣಂ ಮತ್ತು ಕಂಕೆಸಂತುರೈ ನಡುವೆ ದೋಣಿ ಸೇವೆ ಪ್ರಾರಂಭವಾಗಿರುವುದು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲು ಆಗಿದೆ. ಇದರಿಂದ ಉಭಯ ದೇಶಗಳ ನಡುವೆ ಸಂಪರ್ಕ ಹಾಗೂ ವ್ಯಾಪಾರಕ್ಕೆ ಅನುಕೂಲವಾಗಲಿದ್ದು, ರಾಷ್ಟ್ರಗಳ ನಡುವಿನ ದೀರ್ಘಕಾಲದ ಬಾಂಧವ್ಯವನ್ನು ಬಲಪಡಿಸುತ್ತದೆ ಎಂದು ಮೋದಿ ಒತ್ತಿ ಹೇಳಿದ್ದಾರೆ.
ಕವಿ ಸುಬ್ರಮಣ್ಯ ಭಾರತಿಯ ಸಿಂಧು ನದಿಯ ಮಿಸಾಯಿ ಕವಿತೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “ಮಹಾ ಕವಿ ಸುಬ್ರಮಣ್ಯ ಭಾರತಿ ತಮ್ಮ ಸಿಂಧು ನದಿಯ ಮಿಸಾಯಿ ಹಾಡಿನಲ್ಲಿ ನಮ್ಮ ಎರಡು ದೇಶಗಳನ್ನು (ಭಾರತ ಮತ್ತು ಶ್ರೀಲಂಕಾ) ಸಂಪರ್ಕಿಸುವ ಸೇತುವೆಯ ಬಗ್ಗೆ ಮಾತನಾಡಿದ್ದಾರೆ. ಈ ದೋಣಿ ಸೇವೆಯು ಎಲ್ಲಾ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳನ್ನು ಜೀವಂತವಾಗಿ ತರುತ್ತದೆ ಎಂದಿದ್ದಾರೆ.
#WATCH | External Affairs Minister Dr S Jaishankar virtually attends Flag off ceremony of ferry service between Nagapattinam and Kankesanturai
He says, " This is truly a big step for people to people contacts between India and Sri Lanka…this is an affirmation of the people… pic.twitter.com/c4SDr8U21F
— ANI (@ANI) October 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.