ನವದೆಹಲಿ: ಪ್ರಧಾನಿ ಮೋದಿಯ ಕಟ್ಟರ್ ಟೀಕಾಕಾರರಾಗಿರುವ ಜೆಎನ್ಯು (JNU) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರು ಇದೀಗ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪಿಎಂ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿ ಅಚ್ಚರಿ ಮೂಡಿಸಿದ್ದಾರೆ.
ಹೌದು ಇಸ್ರೇಲ್-ಹಮಾಸ್ ಸಂಘರ್ಷವನ್ನು ಪ್ರಸ್ತಾಪಿಸಿ ಅವರು ಭಾರತದಲ್ಲಿ ಹುಟ್ಟಿರುವುದಕ್ಕೆ ನಾವು ಅದೃಷ್ಟವಂತರು ಎಂದು ಹೇಳಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಮಧ್ಯಪ್ರಾಚ್ಯದಲ್ಲಿನ ಘಟನೆಗಳನ್ನು ನೋಡಿದಾಗ, ಇಂದು ನಾನು ಭಾರತೀಯರಾಗಿ ನಾವು ಎಷ್ಟು ಅದೃಷ್ಟವಂತರು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ನಮ್ಮ ಸುರಕ್ಷತೆಗಾಗಿ ತಮ್ಮ ಎಲ್ಲವನ್ನೂ ತ್ಯಾಗಮಾಡಿವೆ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ ಶ್ರೇಯಸ್ಸು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ , ಎಡಿಜಿಪಿಐ, ಭಾರತೀಯ ಸೇನೆಯ ಚೀನಾರ್ ಕಾರ್ಪ್ಸ್ ಗೆ ಸಲ್ಲುತ್ತದೆ” ಎಂದಿದ್ದಾರೆ.
ಮೋದಿ ಟೀಕಾಕಾರಳಿಂದ ಇಂತಹ ಒಂದು ಹೇಳಿಕೆ ಅಚ್ಚರಿ ಎನಿಸಿದರೂ ಆಕೆ ಅಕ್ಷರಶಃ ಸತ್ಯವನ್ನೇ ನುಡಿದಿದ್ದಾಳೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.
Looking at the events in the Middle East, today I realise how lucky we are as Indians. The Indian Army and security forces have sacrificed their everything for our safety.
Credit where it's due @pmoindia @HMOIndia @manojsinha_ @adgpi @ChinarcorpsIA for bringing peace to Kashmir https://t.co/qeUCkJq9g3
— Shehla Rashid (@Shehla_Rashid) October 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.