ಹನೋಯ್: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ವಿಯೆಟ್ನಾಂ ಸಚಿವ ಬುಯಿ ಥಾನ್ ಸನ್ ಅವರೊಂದಿಗೆ ಇಂದು ವಿಯೆಟ್ನಾಂ ರಾಜಧಾನಿ ಹನೋಯಿಯಲ್ಲಿ 18 ನೇ ಭಾರತ-ವಿಯೆಟ್ನಾಂ ಜಂಟಿ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉಭಯ ನಾಯಕರ ಚರ್ಚೆಗಳು ರಾಜಕೀಯ, ರಕ್ಷಣಾ ಮತ್ತು ಕಡಲ ಭದ್ರತೆ, ನ್ಯಾಯಾಂಗ, ವ್ಯಾಪಾರ ಮತ್ತು ಹೂಡಿಕೆ, ಇಂಧನ, ಅಭಿವೃದ್ಧಿ, ಶಿಕ್ಷಣ ಮತ್ತು ತರಬೇತಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಹಕಾರವನ್ನು ಒಳಗೊಂಡಿದ್ದವು ಎಂದು ಮೂಲಗಳು ವರದಿ ಮಾಡಿವೆ.
ಭಾರತ-ವಿಯೆಟ್ನಾಂನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಸಚಿವ ಜೈಶಂಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂಡೋ-ಪೆಸಿಫಿಕ್ ಪ್ರದೇಶದ ದೃಷ್ಟಿಕೋನಗಳು, ಜಾಗತಿಕ ಸಮಸ್ಯೆಗಳಿಗೆ ಬದ್ಧತೆ ಮತ್ತು ವಿವಿಧ ಬಹುಪಕ್ಷೀಯ ಗುಂಪುಗಳಲ್ಲಿ ಸಹಯೋಗವನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಭಾರತ ಮತ್ತು ವಿಯೆಟ್ನಾಂ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ವರ್ಷಗಳನ್ನು ಆಚರಿಸುವ ಸ್ಮರಣಾರ್ಥ ಅಂಚೆಚೀಟಿಗಳನ್ನು ಡಾ ಜೈಶಂಕರ್ ಅನಾವರಣಗೊಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.