ಬೆಂಗಳೂರು: ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿರುವ ಅಮೆರಿಕಾದ ನಾಸಾವು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದಿಂದ ತಂತ್ರಜ್ಞಾನವನ್ನು ಬಯಸುತ್ತಿದೆ ಎಂಬ ಅಂಶವನ್ನು ಸ್ವತಃ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರು ಬಹಿರಂಗಪಡಿಸಿದ್ದಾರೆ.
ಬಾಹ್ಯಾಕಾಶ ಸಂಶೋಧನೆಯಲ್ಲಿ ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ ಅಮೆರಿಕದ ವಿಜ್ಞಾನಿಗಳೇ ಚಂದ್ರಯಾನ-3 ಯಶಸ್ವಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ತಂತ್ರಜ್ಞಾನವನ್ನು ಕೇಳುತ್ತಿರುವುದು ಭಾರತದ ಬೆಳೆಯುತ್ತಿರುವ ಬಾಹ್ಯಾಕಾಶ ಶಕ್ತಿಗೆ ಸಾಕ್ಷಿಯಾಗಿದೆ.
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮನಾಥ್ ಅವರು, ಭಾರತ ಈಗ ಉನ್ನತ ಮಟ್ಟದ ಬಾಹ್ಯಾಕಾಶ ಸಂಶೋಧನಾ ಉಪಕರಣಗಳು ಹಾಗೂ ರಾಕೆಟ್ಗಳನ್ನು ಉತ್ಪಾದಿಸುತ್ತಿದೆ. ಅವುಗಳ ಗುಣಮಟ್ಟ ಹಾಗೂ ಅತೀ ಕಡಿಮೆ ವೆಚ್ಚವನ್ನು ಕೇಳಿ ನಾಸಾ ವಿಜ್ಞಾನಿಗಳು ಈಗ ಭಾರತದ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಯಸಿದ್ದಾರೆ. ಇದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೂ ವಿಸ್ತರಿಸಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.