ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ಯಾಲೆಸ್ತೇನಿಯರಿಗಾಗಿ ಭಾನುವಾರ ಭಾರತವು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ಗಳಷ್ಟು ವಿಪತ್ತು ಪರಿಹಾರ ಸಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ.
ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್ಗಳು, ಮಲಗುವ ಚೀಲಗಳು, ಟಾರ್ಪೌಲಿನ್ಗಳು, ನೈರ್ಮಲ್ಯ ಉಪಯುಕ್ತತೆಗಳು ಮತ್ತು ಇತರ ಅಗತ್ಯ ವಸ್ತುಗಳ ಜೊತೆಗೆ ನೀರು ಶುದ್ಧೀಕರಣ ಮಾತ್ರೆಗಳನ್ನು ಒಳಗೊಂಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಇಸ್ರೇಲ್ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಮೂಲಕ ಗಾಜಾಗೆ ಮಾನವೀಯ ನೆರವನ್ನು ಪೂರೈಕೆ ಮಾಡಲಾಗುತ್ತಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಕದನ ಗಾಜಾದ ಜನತೆಯನ್ನು ಅಕ್ಷರಶಃ ನಲುಗುವಂತೆ ಮಾಡಿದ್ದು, ಅನೇಕರು ನೆಲೆ ಕಳೆದುಕೊಂಡು ಅನಾಥರಾಗಿದ್ದಾರೆ. ಇನ್ನೂ ಅನೇಕರು ಗಾಯಾಳುಗಳಾಗಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.
ಜಗತ್ತಿನ ಯಾವುದೇ ಮೂಲೆಯಲ್ಲೂ ಸಂಕಷ್ಟಗಳು ಎದುರಾದರೆ ಸ್ಪಂದಿಸುವ ಭಾರತ ಇದೀಗ ಗಾಜಾದ ಜನರ ಕಷ್ಟಕ್ಕೂ ನೆರವಾಗುತ್ತಿದೆ.
🇮🇳 sends Humanitarian aid to the people of 🇵🇸!
An IAF C-17 flight carrying nearly 6.5 tonnes of medical aid and 32 tonnes of disaster relief material for the people of Palestine departs for El-Arish airport in Egypt.
The material includes essential life-saving medicines,… pic.twitter.com/28XI6992Ph
— Arindam Bagchi (@MEAIndia) October 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.