ನವದೆಹಲಿ: 2027 ರ ಮೊದಲು ದೇಶದಲ್ಲಿ ಎರಡು ಕೋಟಿಗೂ ಹೆಚ್ಚು ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈಗ ಬಹಳಷ್ಟು ರೈತರು ಸಾವಯವ ಕೃಷಿಯತ್ತ ಮುಖ ಮಾಡಿದ್ದು, ಅವರ ಸಾವಯವ ಉತ್ಪನ್ನಗಳ ಲಾಭವನ್ನು ಅವರಿಗೆ ದೊರಕಿಸಿಕೊಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಇಂದು ನವದೆಹಲಿಯಲ್ಲಿ ನ್ಯಾಷನಲ್ ಕೋಆಪರೇಟಿವ್ ಫಾರ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ (ಎನ್ಸಿಇಎಲ್) ನ ಲೋಗೋ, ವೆಬ್ಸೈಟ್ ಮತ್ತು ಬ್ರೋಷರ್ ಅನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕೃಷಿ ರಫ್ತು ಹೆಚ್ಚಿಸುವುದು ಮತ್ತು ರೈತರನ್ನು ಸಬಲೀಕರಣಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
ರಫ್ತು ಅವಕಾಶಗಳೊಂದಿಗೆ ಸಹಕಾರಿ ಸಂಸ್ಥೆಗಳಿಗೆ ಅನುಕೂಲವಾಗುವಂತೆ ನ್ಯಾಷನಲ್ ಕೋಆಪರೇಟಿವ್ ಎಕ್ಸ್ಪೋರ್ಟ್ ಲಿಮಿಟೆಡ್ ಅನ್ನು ರಚಿಸಲಾಗಿದೆ ಮತ್ತು ಇದು ರೈತರು, ಸಹಕಾರಿ ಸಂಸ್ಥೆಗಳು ಮತ್ತು ಜಾಗತಿಕ ಮಾರುಕಟ್ಟೆಯ ನಡುವೆ ಸಂಪರ್ಕವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಜೈವಿಕ ಇಂಧನ ಒಕ್ಕೂಟವನ್ನು ಪ್ರಾರಂಭಿಸಿದ್ದು, ಭಾರತವು ಈ ಒಕ್ಕೂಟವನ್ನು ಮುನ್ನಡೆಸುತ್ತಿದೆ, ಇದು ಎಥೆನಾಲ್ ಮತ್ತು ಇತರ ಜೈವಿಕ ಇಂಧನಗಳ ಬಗ್ಗೆ ವಿಶ್ವದಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಬೇಡಿಕೆಯನ್ನು ಹೆಚ್ಚಿಸುತ್ತದೆ ಮತ್ತು ಭಾರತವು ಆ ಬೇಡಿಕೆಗಳನ್ನು ಪೂರೈಸುವ ಸಾಧ್ಯತೆಗಳನ್ನು ಹೊಂದಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಹಲವಾರು ಕಂಪನಿಗಳು ಎಥೆನಾಲ್ ಅನ್ನು ಉತ್ಪಾದಿಸುತ್ತವೆ ಎಂದ ಸಚಿವರು, ಸಹಕಾರಿ ಕ್ಷೇತ್ರವೂ ಉಪಕ್ರಮವನ್ನು ತೆಗೆದುಕೊಂಡರೆ, ದೇಶವು ಹೆಚ್ಚುತ್ತಿರುವ ಎಥೆನಾಲ್ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.