ಶ್ರೀನಗರ: ಭದ್ರತಾ ಪಡೆಗಳು ಗುರುವಾರ ಐವರು ಎಲ್ಇಟಿ ಭಯೋತ್ಪಾದಕರನ್ನು ಕುಪ್ವಾರಾ ಜಿಲ್ಲೆಯ ಎಲ್ಒಸಿಯ ಮೂಲಕ ಒಳನುಸುಳುವಿಕೆಗೆ ಯತ್ನಿಸಿದ ಸಂದರ್ಭದಲ್ಲಿ ಗುಂಡು ಹಾರಿಸಿ ಸಂಹರಿಸಿವೆ. ಅಲ್ಲದೇ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ರೇಂಜರ್ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಪ್ವಾರದ ಮಚಿಲ್ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯ ಕೆಲವೇ ಗಂಟೆಗಳ ನಂತರ ಅರ್ನಿಯಾ ಸೆಕ್ಟರ್ನಲ್ಲಿ ಕದನ ವಿರಾಮ ಉಲ್ಲಂಘನೆಯಾಗಿದೆ.
ರಾತ್ರಿ 8 ಗಂಟೆ ಸುಮಾರಿಗೆ ಪಾಕಿಸ್ತಾನ ರೇಂಜರ್ಗಳು ಭಾರತೀಯ ಪೋಸ್ಟ್ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು ಮತ್ತು ಭಾರತೀಯ ಪಡೆಗಳು ಸೂಕ್ತವ ಪ್ರತಿದಾಳಿ ನಡೆಸಿದರು ಎಂದು ಹಿರಿಯ ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಚಕಮಕಿ ಈಗಲೂ ಮುಂದುವರೆದಿದ್ದು, ಗುಂಡಿನ ದಾಳಿಯಲ್ಲಿ ಕೆಲವು ಬಿಎಸ್ಎಫ್ ಯೋಧರು ಗಾಯಗೊಂಡಿದ್ದಾರೆ, ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎನ್ನಲಾಗಿದೆ.
ಹಿರಿಯ ಬಿಎಸ್ಎಫ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಚ್ಚಿಲ್ ಸೆಕ್ಟರ್ ಕಾರ್ಯಾಚರಣೆಯಲ್ಲಿ, ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದರಿಂದ ಐವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರು ಕೊಲ್ಲಲ್ಪಟ್ಟರು ಎಂದು ವರದಿಗಳು ತಿಳಿಸಿವೆ.
#WATCH | Jammu and Kashmir: Visuals from RS Pura sector where an explosion is heard after Pak Rangers started unprovoked firing on BSF posts in Arnia area in violation of the ceasefire. https://t.co/wgZISa5VJ9 pic.twitter.com/DUz9QJKU6i
— ANI (@ANI) October 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.