ನವದೆಹಲಿ: 6G ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತವನ್ನು ಮುಂಚೂಣಿಯಲ್ಲಿ ಇರುವಂತೆ ಮಾಡಲು ಸರ್ಕಾರ ದಾಪುಗಾಲು ಹಾಕುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ಇಂಡಿಯನ್ ಮೊಬೈಲ್ ಕಾಂಗ್ರೆಸ್ 2023ರ 7 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಪ್ರತಿಯೊಬ್ಬ ನಾಗರಿಕರಿಗೂ 5G ಸಂಪರ್ಕವನ್ನು ತರುವ ಪ್ರಯತ್ನವನ್ನು ಸರ್ಕಾರ ಪ್ರಾರಂಭಿಸಿದೆ. ದೇಶದಲ್ಲಿ 5ಜಿ ತಂತ್ರಜ್ಞಾನ ಆರಂಭವಾದ ನಂತರ ನಾಲ್ಕು ಲಕ್ಷ 5ಜಿ ಆಧಾರಿತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳು 97 ಪ್ರತಿಶತ ನಗರಗಳನ್ನು ಮತ್ತು 80 ಪ್ರತಿಶತಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಒಳಗೊಂಡಿವೆ. ಮೊಬೈಲ್ ಬ್ರಾಡ್ಬ್ಯಾಂಡ್ ವೇಗದಲ್ಲಿ ಭಾರತವು ಹಿಂದಿನ 118 ನೇ ಸ್ಥಾನದಿಂದ 43 ನೇ ಸ್ಥಾನವನ್ನು ತಲುಪಿದೆ ಎಂದು ಅವರು ಹೇಳಿದರು.
ಅಭಿವೃದ್ಧಿಯ ಪ್ರಯೋಜನಗಳು ಪ್ರತಿಯೊಂದು ವರ್ಗ ಮತ್ತು ಪ್ರದೇಶವನ್ನು ತಲುಪುವಂತೆ ಸರ್ಕಾರವು ಕೆಲಸ ಮಾಡುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಜಾಪ್ರಭುತ್ವದ ಶಕ್ತಿಯಲ್ಲಿ ಸರ್ಕಾರ ನಂಬಿಕೆ ಇಟ್ಟಿದೆ. ತಂತ್ರಜ್ಞಾನವು ಅಭಿವೃದ್ಧಿಶೀಲ ರಾಷ್ಟ್ರದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕೆ ಪರಿವರ್ತನೆಯನ್ನು ವೇಗಗೊಳಿಸುವ ವೇಗವರ್ಧಕವಾಗಿದೆ. ಭಾರತದ ಸೆಮಿಕಂಡಕ್ಟರ್ ಮಿಷನ್ ತನ್ನ ದೇಶೀಯ ಬೇಡಿಕೆಗಳನ್ನು ಮಾತ್ರವಲ್ಲದೆ ಜಾಗತಿಕ ಅವಶ್ಯಕತೆಗಳನ್ನು ಪೂರೈಸುವ ಗುರಿಯೊಂದಿಗೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಇಲೆಕ್ಟ್ರಾನಿಕ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಟೆಲಿಕಾಂ ಕ್ಷೇತ್ರವನ್ನು ಬದಲಾಯಿಸಿದ್ದಾರೆ. ಇಂದು ಹಗರಣಗಳು ಮತ್ತು ವ್ಯಾಜ್ಯಗಳಿಂದ ಮುಕ್ತವಾದ ಉದಯೋನ್ಮುಖ ಕ್ಷೇತ್ರವಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.