ನವದೆಹಲಿ: ಬರಗಾಲ ಇದ್ದರೂ ಕರ್ನಾಟಕದ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಮತ್ತು ಬಿಜೆಪಿ ಸಂಸದರು ಕೂಡ ಯಾವುದೇ ರೀತಿಯ ಬೆಂಬಲಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವಿಟ್ಗೆ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಶೇಖಾವತ್ ಅವರು ಕನ್ನಡದಲ್ಲೇ ಟ್ವಿಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
“ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ” ಶೇಖಾವತ್ ಕಿಡಿಕಾರದ್ದಾರೆ.
“ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ” ಎನ್ನುವ ಮೂಲಕ ಸುದೀರ್ಘ ಮಾಹಿತಿಯನ್ನು ಅವರು ನೀಡಿದ್ದಾರೆ.
Dear Shri. @siddaramaiah ,
We know it is tradition for Congress to spread false rumour & misinformation. But it isn’t becoming of a CM to wreak havoc in peoples lives by doing so.
You are very well aware of the status of the Mekedatu project – if not, let us remind you, since… pic.twitter.com/Kqwgi30Bxp
— Gajendra Singh Shekhawat (@gssjodhpur) October 30, 2023
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ,
ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.ಮೇಕೆದಾಟು ಯೋಜನೆಯ…
— Gajendra Singh Shekhawat (@gssjodhpur) October 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.