ನವದೆಹಲಿ: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಬೆಳಗ್ಗೆ ನವದೆಹಲಿಯ ಮೇಜರ್ ಧ್ಯಾನಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ʼರನ್ ಫಾರ್ ಯೂನಿಟಿʼಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾ, ಇಂತಹ ಬೃಹತ್ ದೇಶವನ್ನು ಒಂದುಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಕೊಡುಗೆ ಅವಿಸ್ಮರಣೀಯವಾಗಿದೆ. ಸ್ವಾತಂತ್ರ್ಯಾ ನಂತರ ಬ್ರಿಟಿಷರು ದೇಶವನ್ನು ಛಿದ್ರಗೊಳಿಸಿ ಹೊರಟು ಹೋಗಿದ್ದು, ಆ ಸಮಯದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಕೆಲವೇ ದಿನಗಳಲ್ಲಿ 550 ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳನ್ನು ಒಗ್ಗೂಡಿಸಿ ಭಾರತದ ಭೂಪಟವನ್ನು ರೂಪಿಸುವ ಕೆಲಸವನ್ನು ಮಾಡಿದರು ಎಂದರು.
ಶಾ ಅವರು ʼರನ್ ಫಾರ್ ಯುನಿಟಿʼಯಲ್ಲಿ ನೆರೆದಿದ್ದ ಜನರಿಗೆ ಏಕತೆಯ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನುರಾಗ್ ಸಿಂಗ್ ಠಾಕೂರ್, ನಿತ್ಯಾನಂದ ರೈ, ನಿಶಿತ್ ಪ್ರಮಾಣಿಕ್, ಅಜಯ್ ಕುಮಾರ್ ಮಿಶ್ರಾ, ಮೀನಾಕ್ಷಿ ಲೇಖಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.