ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣಕಾಸು ವಂಚನೆ ಪ್ರಕರಣದಲ್ಲಿ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಕರೆದಿದೆ.
ಹಣಕಾಸು ವಂಚನೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿರುವ ಪ್ರಕರಣದ ತನಿಖಾಧಿಕಾರಿಯ ಮುಂದೆ ದೆಹಲಿ ಮುಖ್ಯಮಂತ್ರಿ ಹೇಳಿಕೆಯನ್ನು ಸಲ್ಲಿಸಿದ ನಂತರ ತನಿಖಾ ಸಂಸ್ಥೆಯು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತದೆ.
ತಮ್ಮನ್ನು ತಾವು ಪ್ರಾಮಾಣಿಕರು ಎಂದು ಕರೆದುಕೊಳ್ಳುವ ಕೇಜ್ರಿವಾಲ್ ಮತ್ತು ಅವರ ಇಡೀ ತಂಡದ ನಿಜಮುಖವನ್ನು ಬಹಿರಂಗಪಡಿಸಲಾಗಿದೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ದೇವ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಈ ಹಗರಣದ ಮಾಸ್ಟರ್ ಮೈಂಡ್ ಮತ್ತು ಕಿಂಗ್ಪಿನ್ ಎಂದು ಅವರು ಆರೋಪಿಸಿದ್ದಾರೆ.
ಇನ್ನೊಂದೆಎ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲು ಬಿಜೆಪಿ ಬಯಸುತ್ತಿದೆ ಎಂದು ಆಪ್ ನಾಯಕ ಮತ್ತು ದೆಹಲಿ ಸಚಿವ ಅತಿಶಿ ಹೇಳಿದ್ದಾರೆ. ಎಎಪಿ ನಾಯಕರು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.