ಕೋಲ್ಕತ್ತಾ: ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ವೇಳೆ ಗ್ಯಾಲರಿಯಲ್ಲಿ ನಿಂತು ಪ್ಯಾಲೆಸ್ತೀನ್ ಧ್ವಜವನ್ನು ಬೀಸಿದ್ದಕ್ಕಾಗಿ ಪೊಲೀಸರು ನಾಲ್ವರನ್ನು ಈಡನ್ ಗಾರ್ಡನ್ಸ್ ಮೈದಾನದಿಂದ ಬಂಧಿಸಿದ್ದಾರೆ.
ತಮ್ಮ ನಿಲುವು ವ್ಯಕ್ತಪಡಿಸಲು ಯುವಕರು ವಿಶ್ವಕಪ್ ಅನ್ನು ಆಯ್ಕೆ ಮಾಡಿಕೊಂಡಿರುವುದರಿಂದ ಅಂತಹ ವರ್ತನೆಗಳಿಗೆ ಯಾವುದೇ ಅವಕಾಶವನ್ನು ನೀಡಲಾಗುವುದಿಲ್ಲ ಎಂದು ಪೊಲೀಸರು ಬಂಧನದ ಬಳಿಕ ಹೇಳಿದ್ದಾರೆ. ಬಂಧಿತರಲ್ಲಿ ಒಬ್ಬ ಬಲ್ಲಿ ಮೂಲದವನಾಗಿದ್ದರೆ, ಮತ್ತೊಬ್ಬ ಎಕ್ಬಾಲ್ಪೋರ್ ಪ್ರದೇಶದ ನಿವಾಸಿ. ಇನ್ನಿಬ್ಬರು ರಾಜಕೀಯ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕರು ಕ್ರೀಡಾಂಗಣಕ್ಕೆ ತೆರಳುವ ಮೊದಲು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಳಿಕ ಕ್ರೀಡಾಂಗಣಕ್ಕೆ ಬಂದು ಗ್ಯಾಲರಿಯಲ್ಲಿ ನಿಂತು ಪ್ಯಾಲೆಸ್ತೀನ್ ಧ್ವಜ ಬೀಸಿದ್ದಾರೆ. ಅವರನ್ನು ಗೇಟ್ 6 ಮತ್ತು ಡಿ ಬ್ಲಾಕ್ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೀಡಾಕೂಟ ಮತ್ತು ಅದರಲ್ಲಿ ಪಾಲ್ಗೊಳ್ಳುವವರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದಾರೆ.
ಹಮಾಸ್ ದಾಳಿಯ ನಂತರ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಆಕ್ರಮಣದ ನಡುವೆ ಈ ಘಟನೆ ಸಂಭವಿಸಿದೆ. ಈ ಪಂದ್ಯದಲ್ಲಿ ಸೋಲು ಕಂಡ ಬಾಂಗ್ಲಾದೇಶ ವಿಶ್ವಕಪ್ನಿಂದ ಹೊರಬಿದ್ದಿದೆ. ಘಟನೆಗೆ ಸಂಬಂಧಿಸಿದಂತೆ ಐಸಿಸಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.