ಮುಂಬಯಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಯ ಕಿಚ್ಚು ಜೋರಾಗಿದೆ. ಈ ನಡುವೆ ಇಂದು ಮುಂಬಯಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮರಾಠಾ ಮೀಸಲಾತಿಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.
ಸರ್ವಪಕ್ಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ವಪಕ್ಷ ಸಭೆಯಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಎಲ್ಲರೂ ಒಪ್ಪಿ, ಕಾನೂನಿನ ಚೌಕಟ್ಟಿನೊಳಗೆ ಮತ್ತು ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಬೇಕು ಎಂದು ತೀರ್ಮಾನಿಸಲಾಯಿತು’ ಎಂದರು.
ಜನರು ಶಾಂತಿ ಕಾಪಾಡಬೇಕು ಮತ್ತು ಸರ್ಕಾರದ ಪ್ರಯತ್ನಗಳಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
#WATCH | Mumbai: After the all-party meeting on the Maratha reservation, Maharashtra CM Eknath Shinde says, "…I request Manoj Jarange Patil to have faith in the efforts of the government…This protest has started taking a new direction…Common people should not feel insecure.… pic.twitter.com/PRjiXKZaZD
— ANI (@ANI) November 1, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.