ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಇಂದು ನವದೆಹಲಿಯಲ್ಲಿ ಏಷ್ಯನ್ ಪ್ಯಾರಾ ಗೇಮ್ಸ್ನ ಕ್ರೀಡಾಪಟುಗಳನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪುರಿ, ನೂರು ಪದಕದ ಗಡಿ ದಾಟಿರುವುದು ರಾಷ್ಟ್ರದ ಹೆಮ್ಮೆಯ ಸಂಗತಿ. ಭಾರತದಲ್ಲಿ ಅಥ್ಲೆಟಿಕ್ಸ್ಗಾಗಿ ಪರಿಸರ ವ್ಯವಸ್ಥೆಯು ವೇಗವಾಗಿ ಪ್ರಗತಿಯಲ್ಲಿದೆ ಮತ್ತು ಭವಿಷ್ಯದಲ್ಲಿ ಪದಕಗಳ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹಾಂಗ್ಝೌ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಚಿನ್ನ ಮತ್ತು ಡಬಲ್ ಬೆಳ್ಳಿ ಪದಕ ವಿಜೇತ ರಾಕೇಶ್ ಕುಮಾರ್ ಅವರು ಮಾತನಾಡಿ, ಪ್ಯಾರಾ ಅಥ್ಲೀಟ್ ಆಗಿ ತಮ್ಮ ಯಶಸ್ಸು ಮತ್ತು ಕಷ್ಟಗಳ ಬಗ್ಗೆ ಮಾತನಾಡಿದರು.
ಮಾಜಿ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮತ್ತು ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿಯ ಅಧ್ಯಕ್ಷೆ ದೀಪಾ ಮಲಿಕ್ ಅವರು ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳ ಯಶಸ್ಸಿನ ಬಗ್ಗೆ ಮಾತನಾಡಿದರು.
Deeply honored by the presence of Hon'ble Ministers @HardeepSPuri and @Rameswar_Teli, as we celebrate the historic success of our para-athletes at #AsianParaGames. Their 111-medal triumph, including 29 golds, are driven by inspiring tales of grit and determination, setting the… https://t.co/2O8DwrnaQX pic.twitter.com/pJY5XwVK0J
— ChairmanIOC (@ChairmanIOCL) November 2, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.