ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೇ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಭಾರತ ಸಿದ್ಧವಿದೆ ಎಂದು ಹೇಳಿದ್ದಾರೆ.
ಟ್ವಿಟ್ ಮಾಡಿರುವ ಪಿಎಂ ಮೋದಿ, “ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಪ್ರಾಣಹಾನಿ ಮತ್ತು ಹಾನಿಯಿಂದ ತೀವ್ರ ದುಃಖವಾಗಿದೆ. ಭಾರತ ನೇಪಾಳದ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಮತ್ತು ಸಾಧ್ಯವಿರುವ ಎಲ್ಲ ನೆರವು ನೀಡಲು ಸಿದ್ಧವಾಗಿದೆ. ನಮ್ಮ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ” ಎಂದಿದ್ದಾರೆ.
ಶುಕ್ರವಾರ ತಡರಾತ್ರಿ ನೇಪಾಳದಲ್ಲಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದ ನಂತರ 128 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 141 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಭೂಕಂಪ ಪೀಡಿತ ಪ್ರದೇಶಗಳಿಗೆ ತೆರಳಿದ್ದಾರೆ.
Deeply saddened by loss of lives and damage due to the earthquake in Nepal. India stands in solidarity with the people of Nepal and is ready to extend all possible assistance. Our thoughts are with the bereaved families and we wish the injured a quick recovery. @cmprachanda
— Narendra Modi (@narendramodi) November 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.