ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆ ಕೊನೆಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ಹಾಗೂ ಇತರೆ ಪಕ್ಷಗಳ ಹಲವು ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಈ ನಡುವೆ, ಕಾಂಗ್ರೆಸ್ ಏಳನೇ ಮತ್ತು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಿನ್ನೆ ರಾತ್ರಿ 21 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ನಗರಾಭಿವೃದ್ಧಿ ಮತ್ತು ವಸತಿ ಸಚಿವ ಶಾಂತಿ ಧರಿವಾಲ್ ಅವರಿಗೆ ಕೋಟಾ ಉತ್ತರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು 26 ಹೆಸರುಗಳ ಪಟ್ಟಿಯನ್ನು ಪ್ರಕಟಿಸಿದೆ. ಬಹುಜನ ಸಮಾಜ ಪಕ್ಷ ನಿನ್ನೆ ತಡರಾತ್ರಿ 26 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಭಾನುವಾರ ಬಿಜೆಪಿಯು 15 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಪಟ್ಟಿಯ ಪ್ರಕಾರ ಅಮಿತ್ ಚೌಧರಿ ಅವರನ್ನು ಹನುಮಾನ್ಗಢದಿಂದ ಕಣಕ್ಕಿಳಿಸಿದೆ. ಅಂಶುಮನ್ ಸಿಂಗ್ ಭಾಟಿ ಅವರಿಗೆ ಕೊಲಾಯತ್ನಿಂದ ಟಿಕೆಕ್ ನೀಡಲಾಗಿದೆ. ಬಿಜೆಪಿ ಈಗ ಎಲ್ಲಾ 200 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಜಸ್ಥಾನದಲ್ಲಿ ಎಲ್ಲಾ 200 ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.