ಕಠ್ಮಂಡು: ನೇಪಾಳದಲ್ಲಿ ಇಂದು ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ. ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪನವಾಗಿದೆ. ಇದರಿಂದ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ ತಿಳಿಸಿದೆ.
ಕಳೆದ ಮೂರು ದಿನಗಳಿಂದ ಭೂಕಂಪನದಿಂದ 150ಕ್ಕೂ ಹೆಚ್ಚು ಜನರನ್ನು ಕಳೆದುಕೊಂಡಿರುವ ನೇಪಾಳಕ್ಕೆ ಇಂದು ಸಂಭವಿಸಿದ ಭೂಕಂಪ ಮತ್ತೊಂದು ದೊಡ್ಡ ಆಘಾತ ನೋಡಿದೆ.
ಉತ್ತರ ಪ್ರದೇಶದ ಅಯೋಧ್ಯೆಯ ಉತ್ತರಕ್ಕೆ 233 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂದು ಅದು ಹೇಳಿದೆ.
ದೆಹಲಿ ಮತ್ತು ಎನ್ ಸಿಆರ್ ನ ಹಲವೆಡೆ ಪೀಠೋಪಕರಣಗಳು ಅಲುಗಾಡಿದ ಬಗ್ಗೆ ವರದಿಯಾಗಿದ್ದು, ಭೂಕಂಪನ ಸ್ಥಳೀಯ ಜನರಲ್ಲಿ ಭೀತಿಯನ್ನುಂಟು ಮಾಡಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಜನರು ವಸತಿ ಕಟ್ಟಡಗಳಿಂದ ಹೊರಬರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.