ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು 96ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
“ಎಲ್ಕೆ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನಮ್ಮ ರಾಷ್ಟ್ರವನ್ನು ಬಲಪಡಿಸಿದ ಸ್ಮರಣೀಯ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಗೆ ದಾರಿದೀಪವಾಗಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
“ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ” ಎಂದು ಅವರು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಹಿರಿಯ ನಾಯಕನಿಗೆ ಶುಭ ಹಾರೈಸಿದ್ದಾರೆ ಮತ್ತು 96 ವರ್ಷ ವರ್ಷದ ಅಡ್ವಾಣಿ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯ ಮೂಲವಾಗಿದ್ದಾರೆ ಎಂದು ಹೇಳಿದ್ದಾರೆ.
“ಗೌರವಾನ್ವಿತ ಲಾಲ್ ಕೃಷ್ಣ ಅಡ್ವಾಣಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಜೀ ಅವರು ತಮ್ಮ ಅವಿರತ ಶ್ರಮ ಮತ್ತು ಸಂಘಟನಾ ಕೌಶಲ್ಯದಿಂದ ಪಕ್ಷವನ್ನು ಬೆಳೆಸಲು ಮತ್ತು ಕಾರ್ಯಕರ್ತರನ್ನು ಕಟ್ಟಲು ಶ್ರಮಿಸಿದ್ದಾರೆ. ಬಿಜೆಪಿಯ ಪ್ರಾರಂಭದಿಂದ ಅಧಿಕಾರಕ್ಕೆ ಬರುವವರೆಗೆ ಅಡ್ವಾಣಿ ಜಿ ಅವರು ಅನುಪಮ ಕೊಡುಗೆ ನೀಡಿದ್ದಾರೆ. ಅವರು ಪ್ರತಿಯೊಬ್ಬ ಕಾರ್ಯರ್ತನಿಗೆ ಸ್ಫೂರ್ತಿ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಶಾ ಟ್ವೀಟ್ ಮಾಡಿದ್ದಾರೆ.
Birthday greetings to Shri LK Advani Ji. He is a beacon of integrity and dedication who has made monumental contributions that have strengthened our nation. His visionary leadership has furthered national progress and unity. I wish him good health and a long life. His efforts…
— Narendra Modi (@narendramodi) November 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.