ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ತಲಪ್ಪುಳದ ಪೆರಿಯಾ ಚಪ್ಪರತ್ ಪ್ರದೇಶದಲ್ಲಿ ಕೇರಳ ಪೊಲೀಸರ ವಿಶೇಷ ತಂಡ ಇಬ್ಬರು ಮಾವೋವಾದಿ ನಕ್ಸಲರನ್ನು ಬಂಧನಕ್ಕೊಳಪಡಿಸಿದೆ. ನಿನ್ನೆ ತಡರಾತ್ರಿ ನಡೆದ ಗುಂಡಿನ ಕಾಳಗದ ತರುವಾಯ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸ್ಥಳೀಯ ವ್ಯಕ್ತಿಯೊಬ್ಬರನ್ನು ಆಹಾರಕ್ಕಾಗಿ ಮಾವೋವಾದಿಗಳು ಸಂಪರ್ಕಿಸಿದಾಗ ಪೊಲೀಸರು ಅವರನ್ನು ಸುತ್ತುವರೆದು ಶರಣಾಗುವಂತೆ ಸೂಚಿಸಿದ್ದಾರೆ, ಇದಕ್ಕೆ ನಿರಾಕರಿಸಿದಾಗ ಎನ್ಕೌಂಟರ್ ನಡೆದಿದೆ ಎಂದು ವರದಿಗಳು ತಿಳಿಸಿವೆ. ಮಾವೋವಾದಿಗಳ ಗುಂಪಿನಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದು, ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚಿಗೆ ಕೋಝಿಕ್ಕೋಡ್ನ ಬಲುಸ್ಸೆರಿಯಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಮಾವೋವಾದಿಯೊಬ್ಬನ ವಿಚಾರಣೆಯ ಸಂದರ್ಭದಲ್ಲಿ ದೊರೆತ ಮಾಹಿತಿಯ ಅನ್ವಯ ವಯನಾಡ್ ಪ್ರದೇಶದಲ್ಲಿ ನಕ್ಸಲ್ ಗುಂಪು ಇರುವುದು ಖಚಿತವಾಗಿತ್ತು. ಹೀಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.