ನವದೆಹಲಿ: ಇಂದು ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವ ಅಗತ್ಯವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಒತ್ತಿ ಹೇಳಿದ್ದಾರೆ.
ನವದೆಹಲಿಯಲ್ಲಿ ನ್ಯಾಷನಲ್ ಕೋಆಪರೇಟಿವ್ ಆರ್ಗಾನಿಕ್ಸ್ ಲಿಮಿಟೆಡ್ ಆಯೋಜಿಸಿದ್ದ ಸಹಕಾರಿ ಸಂಸ್ಥೆಗಳ ಮೂಲಕ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಗುರಿಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಹಲವಾರು ಗುರಿಗಳನ್ನು ಹಾಕಿಕೊಂಡಿದ್ದಾರೆ ಮತ್ತು ಅಂತಹ ಒಂದು ಗುರಿ ಸಾವಯವ ಕೃಷಿಯಾಗಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಶೇ.50 ರಷ್ಟು ಸಾವಯವ ಕೃಷಿಯ ಗುರಿಯನ್ನು ಸಾಧಿಸುವಲ್ಲಿ ಬಹು ಆಯಾಮದ ವಿಧಾನವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ಅವರು ಕೀಟನಾಶಕಗಳ ಅತಿಯಾದ ಬಳಕೆಯ ದುಷ್ಪರಿಣಾಮಗಳನ್ನು ಎತ್ತಿ ತೋರಿಸಿದರು ಮತ್ತು ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವ, ಅದೇ ಸಮಯದಲ್ಲಿ ಉತ್ಪಾದನೆಯನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿಹೇಳಿದರು.
ಈ ಸಂದರ್ಭದಲ್ಲಿ ಅಮಿತ್ ಶಾ ನ್ಯಾಷನಲ್ ಕೋಆಪರೇಟಿವ್ ಆರ್ಗಾನಿಕ್ಸ್ ಲಿಮಿಟೆಡ್ (NCOL), ಅದರ ಲೋಗೋ, ವೆಬ್ಸೈಟ್ ಮತ್ತು ಬ್ರೋಷರ್ ಅನ್ನು ಬಿಡುಗಡೆ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.