ನವದೆಹಲಿ: ಮುಂಬರುವ 25 ವರ್ಷಗಳು ದೇಶದ ಭವಿಷ್ಯಕ್ಕಾಗಿ, ಮಧ್ಯಪ್ರದೇಶ ಮತ್ತು ನಮ್ಮ ಯುವಕರಿಗೆ ಅತ್ಯಂತ ಮಹತ್ವದ್ದಾಗಿದೆ, ಈ 25 ವರ್ಷಗಳು ಯುವಕರ ಜೊತೆಗೆ ದೇಶದ ಪ್ರಗತಿಯನ್ನು ಖಚಿತಪಡಿಸುತ್ತದೆ, ಹೀಗಾಗಿ ಯೋಚಿಸಿ ಮತ ಚಲಾಯಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ.
ಇಂದು ಮಧ್ಯಪ್ರದೇಶದ ದಾಮೋಹ್ನಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಈ ಚುನಾವಣೆಗಳು ಕೇವಲ ಶಾಸಕರನ್ನು ಆಯ್ಕೆ ಮಾಡಲು ಅಲ್ಲ, ಮಧ್ಯಪ್ರದೇಶದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲು ಎಂದು ಹೇಳಿದರು.
ಕಾಂಗ್ರೆಸ್ ಸುಳ್ಳಿನ ಗ್ಯಾರಂಟಿ ಎಂದು ಬಣ್ಣಿಸಿದ ಮೋದಿ, ಕಾಂಗ್ರೆಸ್ ಇತಿಹಾಸ ಸುಳ್ಳಿನಿಂದಲೇ ತುಂಬಿದೆ. ಅವರು ಯಾವಾಗಲೂ ಸುಳ್ಳು ಘೋಷಣೆಗಳನ್ನು ಮಾಡುತ್ತಾರೆ ಎಂದರು.
ಅಲ್ಲದೇ ಸಾರ್ವಜನಿಕ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಸ್ತಾಪಿಸಿದ ಮೋದಿ, ಆಯುಷ್ಮಾನ್ ಯೋಜನೆಯಡಿ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದ್ದು, ಬಡ ಕುಟುಂಬಗಳು ಇದುವರೆಗೆ 1 ಲಕ್ಷ ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ನೀಡುತ್ತಿರುವ ಪಕ್ಕಾ ಮನೆಗಳ ಬಗ್ಗೆ ಉಲ್ಲೇಖಿಸಿದ ಮೋದಿ, ಈ ಯೋಜನೆಯಡಿ ಇದುವರೆಗೆ 4 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದರು. ಅಲ್ಲದೇ ಕಿಸಾನ್ ಸಮ್ಮಾನ್ ನಿಧಿಯಡಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ರೈತರಿಗೆ 12 ಸಾವಿರ ರೂಪಾಯಿಗಳನ್ನು ನೀಡುತ್ತಿದೆ, ಆದರೆ ಕಾಂಗ್ರೆಸ್ ಕೇವಲ ಸಾಲ ಮನ್ನಾ ಭರವಸೆಗಳನ್ನು ನೀಡುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.