ನವದೆಹಲಿ: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು 10 ರಾಜ್ಯಗಳಲ್ಲಿ ದಾಳಿ ನಡೆಸಿದೆ. ಈ ರಾಜ್ಯಗಳಲ್ಲಿ ಕರ್ನಾಕವೂ ಸೇರಿದೆ. ಉಳಿದಂತೆ ತ್ರಿಪುರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರ ಕೂಡ ಸೇರ್ಪಡೆಗೊಂಡಿದೆ.
ತಮಿಳುನಾಡಿನ ಹಲವೆಡೆ ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಚೆಂಗಲ್ಪೇಟ್ ಜಿಲ್ಲೆಯಲ್ಲಿಸುದೀರ್ಘ ಸಮಯದಿಂದ ಉಳಿದುಕೊಂಡಿರುವ ಬಾಂಗ್ಲಾದೇಶದ ಕೂಲಿ ಕಾರ್ಮಿಕರನ್ನು ವಿಚಾರಣೆ ನಡೆಸಿದೆ. ಸುದೀರ್ಘವಾಗಿ ತಂಗಿದ್ದಕ್ಕೆ ಸಂಬಂಧಿಸಿದಂತೆ ಕನಿಷ್ಠ ಇಬ್ಬರನ್ನು ಬಂಧಿಸಿದೆ. ಅವರು ತ್ರಿಪುರಾದಿಂದ ನಕಲಿ ವಿಳಾಸಗಳೊಂದಿಗೆ ನಕಲಿ ಆಧಾರ್ ಐಡಿಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಹುಡುಕಾಟಗಳು ಇನ್ನೂ ನಡೆಯುತ್ತಿವೆ.
ಇನ್ನೊಂದೆಡೆ ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ ಇಂದು ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.