ಪಾಟ್ನಾ: ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಕ್ಷಮೆಯಾಚಿಸಿದ್ದಾರೆ.
ಮುಖ್ಯಮಂತ್ರಿ ನಿನ್ನೆ ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆ ವಿಷಯದ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಮಹಿಳಾ ಸಾಕ್ಷರತೆ ಮತ್ತು ಸಂತಾನೋತ್ಪತ್ತಿ ದರ ಕಡಿತದ ಕುರಿತು ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.
ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿರುವ ನಿತೀಶ್, ಮಹಿಳೆಯರು ಸೇರಿದಂತೆ ಯಾರೊಬ್ಬರ ಭಾವನೆಗೆ ಧಕ್ಕೆ ತರುವುದು ಅವರ ಉದ್ದೇಶವಲ್ಲ. ಈ ಬಗ್ಗೆ ಯಾರಿಗಾದರೂ ಆಕ್ಷೇಪವಿದ್ದಲ್ಲಿ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.
ಇದಕ್ಕೂ ಮುನ್ನ, ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಪಕ್ಷಗಳ ಸದಸ್ಯರು ರಾಜೀನಾಮೆಗೆ ಒತ್ತಾಯಿಸಿದ್ದರಿಂದ ಉಭಯ ಸದನಗಳು ಕೋಲಾಹಲಕ್ಕೆ ಸಾಕ್ಷಿಯಾದವು. ಕೆಳಮನೆಯಲ್ಲಿ, ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರು, ಈ ಹೇಳಿಕೆಗಳು ಅತ್ಯಂತ ಅವಹೇಳನಕಾರಿ ಮತ್ತು ಅಸಂಸದೀಯ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.