ನವದೆಹಲಿ: ಕಳೆದ ವರ್ಷ ಆಗಸ್ಟ್ನಲ್ಲಿ ಗೂಢಚರ್ಯೆ ಮಾಡಿದ ಮೇಲೆ ಕತಾರ್ನಲ್ಲಿ ಬಂಧಿತರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ 8 ಮಂದಿಯ ರಕ್ಷಣೆಗೆ ಭಾರತ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ. ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಗ್ಚಿ ಪ್ರಕರಣದ ವಿವರಗಳು ಲಭ್ಯವಿಲ್ಲ. “ರ್ಪು ಗೌಪ್ಯವಾಗಿದೆ. ಕಾನೂನು ತಂಡದೊಂದಿಗೆ ಮಾತ್ರ ಹಂಚಿಕೊಳ್ಳಲಾಗಿದೆ. ನಾವು ಈಗ ಮುಂದಿನ ಕಾನೂನು ಕ್ರಮಗಳನ್ನು ಅನುಸರಿಸುತ್ತಿದ್ದೇವೆ” ಎಂದಿದ್ದೇವೆ.
“ನಾವು 8 ಮಂದಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ವಿದೇಶಾಂಗ ವ್ಯವಹಾರಗಳ ಸಚಿವಎಸ್ ಜೈಶಂಕರ್ ದೆಹಲಿಯಲ್ಲಿ ಅವರ ಕುಟುಂಬವನ್ನು ಭೇಟಿ ಮಾಡಿದರು. ನಾವು ಸಾಧ್ಯವಿರುವ ಎಲ್ಲ ಕಾನೂನು ಮತ್ತು ದೂತಾವಾಸದ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತೇವೆ” ಎಂದಿದ್ದಾರೆ.
ಅಲ್ಲದೇ ಈ ಸೂಕ್ಷ್ಮ ವಿಷಯದಲ್ಲಿ ಊಹಾಪೋಹಗಳನ್ನು ಹರಡದಂತೆ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.
ಎಂಟು ಮಂದಿಗೆ ಕಾನ್ಸುಲರ್ ಪ್ರವೇಶವನ್ನು ಕೊನೆಯದಾಗಿ ಮಂಗಳವಾರ ಒದಗಿಸಲಾಗಿದೆ ಎಂದು ಬಾಗ್ಚಿ ಹೇಳಿದ್ದಾರೆ.
ಬಂಧಿತರು ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸೇವೆಗಳಿಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.