ಶ್ರೀನಗರ: ಭಯೋತ್ಪಾದನೆಗೆ ಹಣಕಾಸು ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ಸಂಸ್ಥೆ (ಎಸ್ಐಎ)ಯು ಕೇಂದ್ರಾಡಳಿತ ಪ್ರದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಕಾಶ್ಮೀರ ಕಣಿವೆಯ ಶ್ರೀನಗರ, ಅನಂತನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರವೂ ಇದೇ ರೀತಿಯ ದಾಳಿಗಳನ್ನು ಸಂಸ್ಥೆ ನಡೆಸಿತ್ತು.
ಈ ಪ್ರಕರಣವು ಅಪರಾಧದ ಮೂಲಕ ಆದಾಯ ಸಂಗ್ರಹ ಅದನ್ನು ತರುವಾಯ ಪ್ರತ್ಯೇಕತೆ ಮತ್ತು ಭಯೋತ್ಪಾದನೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಬಳಸಿದ್ದಕ್ಕೆ ಸಂಬಂಧಿಸಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.
ವಿಚಾರಣೆಯ ಆಧಾರದ ಮೇಲೆ ಎಸ್ಐಎ ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆಯ ಸಂದರ್ಭದಲ್ಲಿ, ಎರಡು ವರ್ಷಗಳೊಳಗೆ 85 ಕೋಟಿ ರೂಪಾಯಿಗಳ ಹಣವನ್ನು ಸಂಗ್ರಹಿಸಲಾಗಿದೆ ಮತ್ತು ಹಣಕಾಸು ವಂಚನೆ ಮಾಡಲಾಗಿದೆ ಎಂದು ಕಂಡುಬಂದಿದೆ ಎಂದು ಎಸ್ಐಎ ತಿಳಿಸಿದೆ.
ಕಾನೂನು ಜಾರಿ ಏಜೆನ್ಸಿಗಳಿಗೆ ಸಿಕ್ಕಿ ಬೀಳುವುದನ್ನು ತಪ್ಪಿಸಲು ವಹಿವಾಟುಗಳನ್ನು ಹೆಚ್ಚಾಗಿ ನಗದು ಆಧಾರಿತವಾಗಿ ನಡೆಸಲಾಗುತ್ತಿದೆ. ವಿಚಾರಣೆಯಲ್ಲಿ ಕಂಡು ಬಂದ ಅಂಶಗಳ ಆಧಾರದ ಮೇಲೆ, 2023 ರ ಎಫ್ಐಆರ್ ಸಂಖ್ಯೆ 08 ಅನ್ನು ಕಾನೂನಿನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.